ಕನ್ವರ್ ಯಾತ್ರಾರ್ಥಿಗಳಿಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರು ಸಾವು!| Accident

kanvar yatra
Published on

Accident: ವೇಗವಾಗಿ ಬಂದ ಕಾರೊಂದು ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟ ಮಧ್ಯ ಪ್ರದೇಶದ ಗ್ವಾಲಿಯರ್​​ನಲ್ಲಿ ಬುಧವಾರ ನಡೆದಿದೆ. ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.

ಗ್ವಾಲಿಯರ್​ನ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿ ಸಮೀಪ ಶಿವಪುರಿ ಲಿಂಕ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಘಾಟಿಗಾಂವ ಸಮೀಪದ ಸಿಮರಿಯಾ ಗ್ರಾಮದ ಪೂರಣ ಬಂಜಾರಾ, ರಮೇಶ್ ಬಂಜಾರಾ, ದಿನೇಶ್ ಮತ್ತು ಧರ್ಮೇಂದ್ರ ಎಂದು ಗುರುತಿಸಲಾಗಿದೆ.

ಕಾರಿನ ಟೈಯರ್ ಸಿಡಿದು ಚಾಲಕನ ನಿಯಂತ್ರಣ ತಪ್ಪಿದ ಹಿನ್ನೆಲೆ ಕಾರು ಪಲ್ಟಿಯಾಗಿ ಭಕ್ತರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧೀಕ್ಷಕಿ ಹಿನಾ ಖಾನ್ ಮಾಹಿತಿ ನೀಡಿದ್ದಾರೆ. ಘಟನೆಯ ಬಳಿಕ ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದು, ವಾಹನದ ಮಾಲೀಕನನ್ನು ಗುರುತಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. (ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net