ಕಾರಿನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ನಾಲ್ವರನ್ನು ರಕ್ಷಿಸಿದ ಸ್ಥಳೀಯರು

Accident
Published on

ಹುಬ್ಬಳ್ಳಿ: ಸಮೀಪದ ಅದರಗುಂಚಿ‌ ಕ್ರಾಸ್‌ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನೊಳಗೆ ಸಾವುಬದುಕಿನಲ್ಲಿ ಹೋರಾಡುತ್ತಿದ್ದ ನಾಲ್ವರ ಜೀವವನ್ನು ಸ್ಥಳೀಯರಲೇ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.

ತಮಿಳುನಾಡು ಮೂಲದ ಕಾರಿನಲ್ಲಿ ಐವರು ಸೇಲಂ‌ನಿಂದ ಮುಂಬೈಗೆ ತೆರಳುತ್ತಿದ್ದರು. ಹುಬ್ಬಳ್ಳಿಯ ಅದರಗುಂಚಿ‌ ಕ್ರಾಸ್‌ ಬಳಿ ರಸ್ತೆಬದಿ ನಿಂತಿತ್ತ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಅಯ್ಯನಾರ್(35) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೆ ನಾಲ್ವರು ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ನರಳಾಡುತ್ತಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಸ್ಥಳೀಯರು ಕಾರಿನ ಗ್ಲಾಸ್ ಒಡೆದು ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net