ಬೆಂಗಳೂರು: ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿದ ಕಾರು!

Untitled design (19)
Published on

ನಾಯಂಡಹಳ್ಳಿ: ಬೆಳಂಬೆಳಗ್ಗೆ ಬೆಂಗಳೂರಿನ ನಾಯಂಡಹಳ್ಳಿ ಬಳಿಯಿರುವ ರಿಂಗ್​ ರಸ್ತೆಯಲ್ಲಿ ಬಿಎಂಟಿಸಿ ಬಸ್​ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದ ಕಾರು ತಕ್ಷಣವೇ ಹೊತ್ತಿ ಉರಿದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ಅದೃಷ್ಟವಶಾತ್​ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ವೇಗವಾಗಿ ಚಲಿಸುತ್ತಿದ್ದ ಐ20 ಕಾರು ಹಿಂಬದಿಯಿಂದ ಬಿಎಂಟಿಸಿ ಬಸ್​ಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ನೋಡ ನೋಡತ್ತಿದ್ದಂತೆ ಕಾರು ಧಗಧಗನೆ ಹೊತ್ತಿಉರಿದಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ಆಗಮಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net