

ರಾಜಸ್ಥಾನ: ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಐವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಚುರುನಲ್ಲಿ ವರದಿಯಾಗಿದೆ.
ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಮುನ್ನ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಅಧಿಕಾರಿಯೊಬ್ಬರು, ವಾಹನವು ವೇಗದಲ್ಲಿ ಚಲಿಸುತ್ತಿದ್ದಾಗ ಟ್ರಕ್ ಹಿಂದಿಕ್ಕಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).