ಎರಡು ಪ್ರತ್ಯೇಕ ಘಟನೆಗಳಲ್ಲಿ ಹೃದಯಾಘಾತದಿಂದ ಯುವಕ, ಯುವತಿ ಸಾವು!..cardia carrest

cardia carrest
Published on

ಬೆಂಗಳೂರು: ( cardia carrest ) ಎರಡು ಪ್ರತ್ಯೇಕ ಘಟನೆಗಳಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಬೆಂಗಳೂರಿನ ಯುವಕನೊಬ್ಬ, ಹೊಳೆನರಸೀಪುರ ಯುವತಿಯೊಬ್ಬಳು ಒಂದೇ ದಿನ ಸಾವನ್ನಪ್ಪಿರುವ ಘಟನೆ ನಡೆದಿದೆ.

ಸಂಧ್ಯಾ (19) ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.  ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟು ಹೊತ್ತಿಗೆ ಸಂಧ್ಯಾಳ ಪ್ರಾಣ ಪಕ್ಷಿ ಹೋಗಿತ್ತು.  ಸಂಧ್ಯಾಕೆಲ ವರ್ಷಗಳಿಂದ ಬಿಪಿ-ಶುಗರ್‌ನಿಂದ ಬಳಲುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ಕ್ಯಾಬ್‌ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅರಕಲಗೂಡು ಯುವಕ ಹೃದಯಾಘಾತದಿಂದ  ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಮೃತನನ್ನು ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್‌ (19) ಎಂದು ಗುರುತಿಸಲಾಗಿದೆ. ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದ. ಆತನನ್ನು ನೋಡಿದ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗ ಮಧ್ಯೆಯೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net