9 ಪಿಡಿಒಗಳ ವಿರುದ್ಧ ಎಸಿಬಿ ತನಿಖೆ ಸಿಇಒಗೆ ಚಿನ್ನ, ಬೆಳ್ಳಿ ಉಡುಗೊರೆ ನೀಡಿದ ಪ್ರಕರಣ

ACB 11
Published on

ಕೋಲಾರ: ಜಿಪಂ ನಿರ್ಗಮಿತ ಸಿಇಒ ಹಾಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಚಿನ್ನ, ಬೆಳ್ಳಿ ಉಡುಗೊರೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಶ್ರೀನಿವಾಸಪುರ ತಾಪಂ ಇಒ ಹಾಗೂ 9 ಪಿಡಿಒಗಳ ಮೇಲೆ ತನಿಖೆ ನಡೆಸಿ ವರದಿ ನೀಡು ವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸಿಬಿಗೆ ಆದೇಶಿಸಿದೆ.

ಕಳೆದ ಆ.23ರಂದು ಕೋಲಾರ ಜಿಪಂನಲ್ಲಿ ನಡೆದ ಸಮಾರಂಭದಲ್ಲಿ ಶ್ರೀನಿವಾಸಪುರ ತಾಪಂ ಇಒ ಎಸ್.ಆನಂದ್ ಹಾಗೂ 9 ಪಿಡಿಒಗಳು ಕೆಸಿಎಸ್ ನಿಯಮಗಳಿಗೆ ವಿರುದ್ಧವಾಗಿ ಹಾಗೂ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಬೆಳ್ಳಿಗದೆ, ಕಿರೀಟ ಹಾಗೂ ಚಿನ್ನದ ಉಂಗುರವನ್ನು ನೀಡುವ ಮೂಲಕ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ರೊಬ್ಬರು ಎಸಿಬಿಗೆ ದೂರು ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ 2020ರ ಜೂ.17ರಂದು ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾ ಧೀಶ ಎಂ.ಎಲ್.ರಘುನಾಥ್ ಆ.25ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಆದೇಶ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net