ಮುಂಬೈನಲ್ಲಿ ಪಾರಿವಾಳಕ್ಕೆ ಆಹಾರ ಹಾಕಿದರೆ ಕೇಸ್

pegion
Published on

ಮುಂಬೈ: ಸಾರ್ವಜನಿಕ ಸ್ಥಳದಲ್ಲಿ ಪಾರಿವಾಳಕ್ಕೆ ಆಹಾರ ನೀಡುವುದನ್ನು ನಿಷೇಧಿಸುವ ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಅದನ್ನು ಉಲ್ಲಂಘಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಅನಾಮಿಕ ವ್ಯಕ್ತಿಗಳ ವಿರುದ್ಧ ಪ್ರಥಮ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದ್ದಾರೆ. ಸಾರ್ವಜನಿಕವಾಗಿ ಪಾರಿವಾಳಕ್ಕೆ ಆಹಾರ ನೀಡುವುದು ಭಾರತೀಯ ನ್ಯಾಯ ಸಂಹಿತೆ (ಬಿಎನ್​ಎಸ್) ಅನ್ವಯ ಶಿಕ್ಷಾರ್ಹ ಅಪರಾಧವೆಂಬ ಕಾನೂನನ್ನು ರೂಪಿಸಲಾಗಿದೆ.

ಎಲ್​ಜೆ ರಸ್ತೆಯಲ್ಲಿರುವ ಕಬೂತರ್​ಖಾನಾ ಬಳಿ ಪಾರಿವಾಳಗಳಿಗೆ ಕೆಲವು ಅನಾಮಿಕ ವ್ಯಕ್ತಿಗಳು ಆಹಾರ ನೀಡುತ್ತಿರುವುದನ್ನು ಗಮನಿಸಲಾಗಿದ್ದು ಅವರ ವಿರುದ್ಧ ಮಾಹಿಮ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ. ಸಾರ್ವಜನಿಕ ಸ್ಥಳಗಳು ಮತ್ತು ಪಾರಂಪರಿಕ ತಾಣಗಳಲ್ಲಿ ಪಾರಿವಾಳಗಳಿಗೆ ಉಣಿಸುವುದರ ಮೇಲೆ ದೀರ್ಘಕಾಲದಿಂದ ಇರುವ ನಿಷೇಧವನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಬಾಂಬೆ ಹೈಕೋರ್ಟ್ ಜುಲೈ 31ರಂದು ನಿರ್ದೇಶಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net