

ಬೆಂಗಳೂರು: ನಗರ ಸಂಚಾರ ಪೂರ್ವ ವಿಭಾಗದ ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ಶನಿವಾರ ರಾತ್ರಿ ವಿಶೇಷ ಕಾರ್ಯಾಚರಣೆ ಕೈಗೊಂಡು 28 ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸಂಚಾರ ಪೂರ್ವ ವಿಭಾಗದ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಈ ವಿಶೇಷ ಕಾರ್ಯಾಚರಣೆಯಲ್ಲಿ ೭೩೫ ವಾಹನಗಳನ್ನು ತಪಾಸಣೆ ಮಾಡಲಾಗಿದೆ. ಈ ಪೈಕಿ ಪಾನಮತ್ತರಾಗಿ ವಾಹನ ಚಲಾಯಿಸುತ್ತಿದ್ದ ೨೮ ಚಾಲಕರು ಸಿಕ್ಕಿಬಿದ್ದಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿರುವ ಸಂಚಾರ ಪೊಲೀಸರು, ಚಾಲನಾ ಪರವಾನಗಿ ರದ್ದಿಗೆ ಸಂಬಂಧಪಟ್ಟ ಆರ್‌ಟಿಒ ಕಚೇರಿಗಳಿಗೆ ಶಿಫಾರಸು ಮಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.