ಬಿಗ್​ಬಾಸ್​ನಲ್ಲಿ ಮತ್ತೊಂದು ಅವಾಂತರ;​ ಸ್ಪರ್ಧಿ ತನಿಷಾ ಕುಪ್ಪಂಡ ವಿರುದ್ಧ ಪ್ರಕರಣ ದಾಖಲು

tanisha kuppanda
Published on

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​-10 ಈ ಬಾರಿ ಒಂದಿಲ್ಲೊಂದು ವಿಚಾರಕ್ಕೆ ಹೆಚ್ಚು ಸದ್ದು ಮಾಡುತ್ತಿದ್ದು, ಇದೀಗ ಬಿಗ್ ಬಾಸ್​ ಮನೆಯ ಸ್ಪರ್ಧಿ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.

ಈ ಹಿಂದೆ ಹುಲಿ ಉಗುರು ಧರಿಸಿದ್ದರೆಂಬ ಕಾರಣಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ್​ ಅವರನ್ನು ಬಂಧಿಸಲಾಗಿತ್ತು. ಇದೀಗ ಬಿಗ್​ಬಾಸ್​ ಸ್ಪರ್ಧಿ, ನಟಿ ತನಿಷಾ ಕುಪ್ಪಂಡ ಅವಹೇಳನಕಾರಿಯಾಗಿ ಮಾತನಾಡಿದ್ದಾರ ಎಂದು ಆರೋಪಿಸಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ನಟಿ ತನಿಷಾ ವಿರುದ್ಧ ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Fir Copy

ಇತ್ತೀಚಿನ ಸಂಚಿಕೆಯೊಂದರಲ್ಲಿ ನಟಿ ತನಿಷಾ ಡ್ರೋನ್​ ಪ್ರತಪಾ್​ ಅವರೊಂದಿಗೆ ಮಾತನಾಡುವ ವೇಳೆ ಬೋವಿ ಜನಾಂಗದ ಬಗ್ಗೆ ಅವಮಾನಕರ ಪದ ಬಳಸಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ಬೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಕುಂಬಳಗೋಡು ಪೊಲೀಸ್​ ಠಾಣೆಯಲ್ಲಿ ಜಾತಿ ನಿಂದನೆ (Atrocity), ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ.

ತನಿಷಾ, ವಡ್ಡ ಎಂಬ ಪದ ಬಳಸುವ ಮೂಲಕ ಭೋವಿ ಸಮುದಾಯಕ್ಕೆ ಅಪಮಾನ ಎಸಗಿದ್ದಾರೆ. ಭೋವಿ ಸಮುದಾಯವು ಪರಿಶಿಷ್ಟ ಜಾತಿಗೆ ಸೇರಿದೆ ಎಂದು ತಿಳಿದೂ ಸಹ ಅಪಮಾನ ಮಾಡಲಾಗಿದೆ. ತನಿಷಾ ಅವರನ್ನು ಈ ಕೂಡಲೇ ಬಿಗ್​ಬಾಸ್ ಮನೆಯಿಂದ ಹೊರಗೆ ಕಳಿಸಬೇಕು, ಪೊಲೀಸರು ತನಿಷಾರನ್ನು ಬಂಧಿಸಬೇಕು. ಭೋವಿ ಸಮುದಾಯಕ್ಕೆ ಮಾಡಲಾದ ಅಪಮಾನದ ವಿರುದ್ಧ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಭೋವಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಉಲ್ಲೇಖಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net