ಮುಸ್ಲಿಮರ ಓಲೈಕೆಗೆ ಕೇಸ್ ವಾಪಸ್; ಆರ್.ಅಶೋಕ್ | Legal fight thought

r ashoka
Published on

ಬೆಂಗಳೂರು:  ಚಿತ್ತಾಪುರದಲ್ಲಿ, ಮುಸ್ಲಿಮರನ್ನು ಸಮಾಧಾನಪಡಿಸಲು ಗೋಹತ್ಯೆ ಮಾಡಿದವರ ವಿರುದ್ಧದ ಪ್ರಕರಣವನ್ನು ಹಿಂಪಡೆಯಲಾಗಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ದುಷ್ಕರ್ಮಿಗಳನ್ನು ಬೆಂಬಲಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಂಗಖವಾರ ಮಾತನಾಡಿದ ಅವರು, ಚಿತ್ತಾಪುರ ತಾಲ್ಲೂಕಿನಲ್ಲಿ, ಗೋ ಕಳ್ಳತನ ಸಾಗಣೆ ಮತ್ತು ಗೋಹತ್ಯೆಯಲ್ಲಿ ಭಾಗಿಯಾಗಿರುವ ಸುಮಾರು 30 ಜನರ ವಿರುದ್ಧ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದರು. ಈ ಕ್ರಮದ ವಿರೋಧಿಸಿದ ದುಷ್ಕರ್ಮಿಗಳು ಪೊಲೀಸ್ ಠಾಣೆಗೆ ನುಗ್ಗಿ, ಕಲ್ಲು ತೂರಾಟ ನಡೆಸಿ, ದಾಳಿ ಮಾಡಿದ್ದಾರೆ.

ಕ್ಷೇತ್ರದ ಶಾಸಕ, ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಕ್ಕೆ ಪತ್ರ ಬರೆದು ಕಳ್ಳರನ್ನು ಬಿಡುಗಡೆ ಮಾಡುವಂತೆ ಮತ್ತು ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿದರು. ಅದರಂತೆ, ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಯಿತು.

ಹುಬ್ಬಳ್ಳಿ ಗಲಭೆ ವಿಷಯದಲ್ಲೂ ನ್ಯಾಯಾಲಯವು ಸರ್ಕಾರಕ್ಕೆ ಛೀಮಾರಿ ಹಾಕಿ ಹಾಕಿತ್ತು. ಚಿತ್ತಾಪುರ ಪ್ರಕರಣದಲ್ಲೂ ಅದೇ ಮರುಕಳಿಸಲಿದೆ ಎಂದು ಆರ್.ಅಶೋಕ್ ಹೇಳಿದರು.

ಮುಸ್ಲಿಮರ ವಿಷಯವನ್ನು ಎತ್ತಿದಾಗಲೆಲ್ಲಾ ಕಾಂಗ್ರೆಸ್ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುತ್ತದೆ. ಅವರು ಗೋಹತ್ಯೆಗೆ ಅವಕಾಶ ನೀಡಿದರೆ, ಅವರು ಗಾಂಧಿಗೆ ಯಾವ ರೀತಿಯ ಮಾನ್ಯತೆ ನೀಡುತ್ತಿದ್ದಾರೆ?  ಎಂದು ಕೇಳಿದರು.

ಕಾನೂನು ಹೋರಾಟ

ಇದು ಮುಸ್ಲಿಂ ತುಷ್ಟೀಕರಣದ ಸಂಸ್ಕೃತಿ. ಅವರನ್ನು ಹೀಗೆ ಬಿಡುಗಡೆ ಮಾಡಿದರೆ, ಅವರು ಮತ್ತೆ ಅದೇ ದಂಧೆಯಲ್ಲಿ ತೊಡಗುತ್ತಾರೆ. ಇದರ ವಿರುದ್ಧ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ. ಇದರಲ್ಲಿಯೂ ನಮಗೆ ಜಯ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಅವಧಿಯಲ್ಲಿ ಶೈಕ್ಷಣಿಕೇತರ ಚಟುವಟಿಕೆ ಬಗ್ಗೆ ಹೊರಡಿಸಲಾದ ಆದೇಶವನ್ನು ಸರಿಯಾಗಿ ಓದಬೇಕು. ಅದರಲ್ಲಿ ಮುಖ್ಯಮಂತ್ರಿಯ ಸಹಿ ಇಲ್ಲ. ಇದು ಚಾಮರಾಜಪೇಟೆಯ ಒಂದೇ ಒಂದು ಶಾಲೆಗೆ ಸಂಬಂಧಿಸಿದಂತೆ ಹೊರಡಿಸಲಾದ ಸಣ್ಣ ಆದೇಶವಾಗಿತ್ತು. ಇದನ್ನು ಶಿಕ್ಷಣ ಇಲಾಖೆ ಮಟ್ಟದಲ್ಲಿ ಮಾಡಲಾಗಿದೆ.

ಇದರಲ್ಲಿ ಮುಖ್ಯಮಂತ್ರಿಯ ಪಾತ್ರವಿರಲಿಲ್ಲ. ವಾಲ್ಮೀಕಿ ನಿಗಮದ ಹಗರಣ ನಡೆದಾಗ, 14 ಸ್ಥಳಗಳನ್ನು ಲೂಟಿ ಮಾಡಿದಾಗ, ಎಲ್ಲಾ ಸಂದರ್ಭಗಳಲ್ಲಿ, ಅಧಿಕಾರಿಗಳು ಸಹಿ ಮಾಡಿದ್ದಾರೆ. ಹಾಗಾದರೆ, ಈ ಎಲ್ಲಾ ಹಗರಣಗಳನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದರ್ಥವೇ? ಎಂದು ಅವರು ಪ್ರಶ್ನಿಸಿದರು.

ಆರ್ ಎಸ್ ಎಸ್ ಗೆ ಚಿಂತೆ ಇಲ್ಲ

ಆರ್‌ಎಸ್‌ಎಸ್‌ಗೆ ಯಾವುದೇ ಚಿಂತೆ ಇಲ್ಲ. ಇದು ಇಡೀ ದೇಶಾದ್ಯಂತ ಇರುವ ಸಂಘಟನೆಯಾಗಿದೆ. ಆರ್‌ಎಸ್‌ಎಸ್ ನಾಯಕರು ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಆರ್‌ಎಸ್‌ಎಸ್ ಗಂಭೀರವಾಗಿ ಪರಿಗಣಿಸಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಅತ್ಯಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ತೇಜಸ್ವಿ ಸೂರ್ಯ ಒಮ್ಮೆಯೂ ಸೋತಿಲ್ಲ.  ಸಿದ್ದರಾಮಯ್ಯ ಅವರ ಮತಗಳು ಕಡಿಮೆಯಾದರೆ, ಅವರು ತೇಜಸ್ವಿ ಸೂರ್ಯ ಅವರನ್ನು ಕೇಳಬಹುದು. ಅವರನ್ನು ಅಮಾವಾಸ್ಯೆ ಅಥವಾ ಹುಣ್ಣಿಮೆ ಎಂದು ಕರೆಯುವ ಅಗತ್ಯವಿಲ್ಲ.

ಪ್ರಧಾನಿ ನರೇಂದ್ರ ಮೋದಿ ರೈಲ್ವೆ, ರಸ್ತೆಗಳು, ಕುಡಿಯುವ ನೀರಿಗೆ ಎಷ್ಟು ನೀಡಿದ್ದಾರೆ ಮತ್ತು ಹಿಂದಿನ ಮನಮೋಹನ್ ಸಿಂಗ್ ಎಷ್ಟು ನೀಡಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರ ಹೇಳಲಿ. ಎನ್‌ಡಿಎ ಸರ್ಕಾರ ಐದು ಪಟ್ಟು ಹೆಚ್ಚು ಅನುದಾನ ನೀಡಿದೆ.

ರಾಜ್ಯ ಕಾಂಗ್ರೆಸ್‌ನಿಂದ ಒಂದೇ ಒಂದು ಬಸ್ ನಿಲ್ದಾಣ, ಆಸ್ಪತ್ರೆ ಅಥವಾ ರಸ್ತೆಯನ್ನು ನಿರ್ಮಿಸಲಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಇತರ ದೇಶಗಳಿಗೆ ಸಹಾಯ ಮಾಡಿದೆ. ಜಿಡಿಪಿ ವೇಗವಾಗಿ ಬೆಳೆಯುತ್ತಿದೆ ಎಂದು ಆರ್.ಅಶೋಕ್ ಸಮರ್ಥಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net