ಜಾತಿ ಗಣತಿ; ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು|JDS hits back

JDS-party-symbol
Published on

ಬೆಂಗಳೂರು: ಜಾತಿ ಗಣತಿ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು(Caste census; JDS hits back at CM Siddaramaiah) ನೀಡಿದೆ.

ನರೇಂದ್ರ ಮೋದಿ ಅವರ ನಿರ್ಣಯದ ಜಾತಿ ಗಣತಿಯನ್ನು ಜೆಡಿಎಸ್ ಸ್ವಾಗತಿಸಿದೆ. ಆದರೆ, ನಿಮ್ಮ ಜಾತಿಗಣತಿಯನ್ನು ಜೆಡಿಎಸ್ ವಿರೋಧಿಸಿಲ್ಲ. ನಿಮ್ಮ ಗಣತಿ ಕ್ರಮಬದ್ಧವಾಗಿಲ್ಲ ಎಂಬ ಕಾರಣಕ್ಕೆ ವಿರೋಧಿಸಿದೆ ಎಂದು ಟಾಂಗ್ ನೀಡಿದೆ.

ದೇವೇಗೌಡರ ಗರಡಿಯಲ್ಲೇ ಬೆಳೆದು ರಾಜಕೀಯ ಬದುಕು ಕಟ್ಟಿಕೊಂಡ ಸಿದ್ದರಾಮಯ್ಯ ಅವರು ಇಬ್ಬಗೆಯ ನೀತಿ ಬಗ್ಗೆ ಆಣಿಮುತ್ತು ಉದುರಿಸಿದ್ದಾರೆ! ಆಣಿಮುತ್ತು ಉದುರಿಸುವ ಭರದಲ್ಲಿ ತಾವೇನು? ತಮ್ಮ ನಿಜಬಣ್ಣವೇನು ಎಂಬುದನ್ನು ಮತ್ತೊಮ್ಮೆ ಲೋಕಾರ್ಪಿತ ಮಾಡಿದ್ದಾರೆ! ಸಿದ್ದರಾಮಯ್ಯನವರು ಎಂದರೆ ದೇಹವೊಂದು, ನಾಲಿಗೆ ಎರಡು ಎಂದು ಜೆಡಿಎಸ್ ಕುಟುಕಿದೆ.

ಸಿದ್ದರಾಮಯ್ಯನವರು ಜನತಾ ಪರಿವಾರದಲ್ಲಿದ್ದಾಗ ಇಂದಿರಾ ಗಾಂಧಿ ಅವರ ಬಗ್ಗೆ ಉದುರಿಸಿದ್ದ ಭಾರೀ ಭಾರೀ ಆಣಿಮುತ್ತುಗಳನ್ನು ಜೀರ್ಣಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಂದ ಸಾಧ್ಯವಿದೆಯಾ? ಇಂದಿರಾ ಗಾಂಧಿ ಅವರು ನಮ್ಮ ನಡುವೆ ಇಲ್ಲ. ಹೀಗಾಗಿ ಅವರ ಬಗ್ಗೆ ಸಿದ್ದರಾಮಯ್ಯನವರು ಉದುರಿಸಿದ್ದ ಆಣಿಮುತ್ತುಗಳನ್ನು ಉಲ್ಲೇಖಿಸುವುದು ಅಪ್ರಸ್ತುತ ಎಂದು ಜೆಡಿಎಸ್ ಹೇಳಿದೆ.

ನಿಮ್ಮ ಜಾತಿ ಗಣತಿ ಸುಳ್ಳು ಅಂಕಿ-ಅಂಶಗಳ ಕಾಗಕ್ಕಗುಬ್ಬಕ್ಕನ ಕಥೆ ಎಂಬುದನ್ನು ಜನರಿಗೆ ತಿಳಿಸಿದೆ ಎಂದು ಜೆಡಿಎಸ್ ಲೇವಡಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net