ಜಾತಿ ಗಣತಿ ವರದಿ: ಸಚಿವರ ಅಭಿಪ್ರಾಯದ ನಂತರ ಅಂತಿಮ ತೀರ್ಮಾನ; ಸಿಎಂ ಸಿದ್ದರಾಮಯ್ಯ | Caste Census Report

dk - 2025-04-20T145826.465
Published on

Caste Census Report : ಸಚಿವ ಸಂಪುಟ ಸಭೆಯಲ್ಲಿ ಯಾರೂ ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಯಾರೂ ಜೋರಾಗಿ ಮಾತನಾಡಿಲ್ಲ. ಸಮೀಕ್ಷೆಯನ್ನು ಓದಿಕೊಂಡು ಅಭಿಪ್ರಾಯಗಳನ್ನು ತಿಳಿಸುವಂತೆ ಸೂಚಿಸಲಾಗಿದ್ದು ಸಚಿವರು ಅಭಿಪ್ರಾಯ ತಿಳಿಸಿದ ನಂತರ ಪುನ: ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜತೆ ಭಾನುವಾರ ಮಾತನಾಡಿದರು. ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ, ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು ,ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ನುಡಿದರು.

ಅಶೋಕಗೆ ತಿರುಗೇಟು

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮೂಲ ಪ್ರತಿ ಮುಖ್ಯಮಂತ್ರಿಗಳ ಬಳಿಯಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಆಶೋಕ್ ಅವರು ಯಾವತ್ತಾದರೂ ಸತ್ಯವನ್ನು ಹೇಳಿದ್ದಾರೆಯೇ? ಅವರು ಸುಳ್ಳೇ ಹೇಳುವುದು. ಮೂಲ ಪ್ರತಿ ನನ್ನ ಬಳಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ರಾಹುಲ್ ಗಾಂಧಿಯವರಿಗೆ ನಾವು ಪತ್ರ ಬರೆದಿಲ್ಲ ಆದರೆ ಅವರೊಂದಿಗೆ ಚರ್ಚೆ ಮಾಡಿ ಸಚಿವ ಸಂಪುಟ ಸಭೆಯಲ್ಲಿ ಸಮೀಕ್ಷೆಯ ವರದಿಯನ್ನು ಮಂಡಿಸಿದ್ದೇವೆ ಎಂದರು.

ಯಾವ ಜಾತಿಗೂ ಅನ್ಯಾಯ

ಯಾವ ಜಾತಿಗೂ ಅನ್ಯಾಯವಾಗಬಾರದು ಎನ್ನುವುದು ಸರ್ಕಾರದ ಉದ್ದೇಶ. ಇದು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ. ಸಂವಿಧಾನ ಜಾರಿಯಾಗಿ 75 ವರ್ಷಗಳಾಗಿದ್ದರೂ ಬಡವ ಬಡವನಾಗಿಯೇ ಉಳಿಯಬೇಕೆ? ಸಮಾನತೆ ಬೇಡವೇ, ಜಾತಿಗೆ ಅಂಟಿಕೊಂಡೇ ಇರಬೇಕೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net