ಜಾತಿ ಗಣತಿ ವೈಜ್ಞಾನಿಕವಾಗಿ ಆಗಬೇಕು; ಅರಣ್ಯ ಸಚಿವ ಖಂಡ್ರೆ

Eshwara Khandre
Published on

ಬೆಂಗಳೂರು: ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ಲಿಂಗಾಯತ- ಒಕ್ಕಲಿಗ ಸಮುದಾಯ ಸೇರಿದಂತೆ ಯಾರು ಕೂಡ ಜಾತಿ ಗಣತಿಗೆ ಯಾರು ವಿರೋಧ ಇಲ್ಲ. ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಗಬೇಕು, ಆದರೆ ವೈಜ್ಞಾನಿಕವಾಗಿ ಸಮೀಕ್ಷೆ ಆಗಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು ಜನರು ನಮ್ಮ ಮನೆಗೆ ಸಮೀಕ್ಷೆ ಮಾಡಲು ಬಂದಿಲ್ಲ ಅಂದಿದ್ದಾರೆ. ಈ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮೊದಲು ಚರ್ಚೆ ಮಾಡಬೇಕು. ಸಚಿವ ಸಂಪುಟ ಸಭೆಯಲ್ಲಿ ನನ್ನ ಅಭಿಪ್ರಾಯ ಹೇಳುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net