VIDEO| ಗೋವಾದಲ್ಲಿ ಸೋನಿಯಾ ಗಾಂಧಿ ಸೈಕಲ್​ ಸವಾರಿ: ವಿಡಿಯೋ ವೈರಲ್..!​

Sonia Cycle
Published on

ಹುಬ್ಬಳ್ಳಿ: ಗೋವಾದಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೈಕಲ್​ ಸವಾರಿ ಮಾಡುತ್ತಿರುವ ವಿಡಿಯೋ ಭಾರಿ ವೈರಲ್​ ಆಗಿದೆ.

ಇಂದು ಬೆಳಗ್ಗೆ ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್‌ನ ಆವರಣದಲ್ಲಿ ಸೈಕಲ್ ಸವಾರಿ ಮಾಡಿದ್ದು, ಆ ದೃಶ್ಯವನ್ನು ಕಾಂಗ್ರೆಸ್​ ಮುಖಂಡ ರಜತ ಉಳ್ಳಾಗಡ್ಡಿ ಮಠ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಸೋನಿಯಾ ಗಾಂಧಿ ಅವರು ಕೆಲ ತಿಂಗಳಿನಿಂದ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅವರಿರುವ ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ದಿನೇದಿನೆ ಹೆಚ್ಚುತ್ತಿದ್ದು, ಆರೋಗ್ಯ ದೃಷ್ಟಿಯಿಂದ ವೈದ್ಯರ ಸಲಹೆ ಮೇರೆಗೆ ತಮ್ಮ ಪುತ್ರ ರಾಹುಲ್​ ಗಾಂಧಿ ಜತೆಯಲ್ಲಿ ಗೋವಾದಲ್ಲಿ ಉಳಿದುಕೊಂಡಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ತಗ್ಗುವವರೆಗೂ ಅವರು ದೆಹಲಿಗೆ ಮರಳುವುದಿಲ್ಲ ಎಂದು ಕೆಲ ಮೂಲಗಳು ತಿಳಿಸಿವೆ. ಸದ್ಯ ಸೋನಿಯಾ ಅವರ ಸೈಕಲಿಂಗ್ ವರ್ಕೌಟ್ ವಿಡಿಯೋ ವೈರಲ್​ ಆಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net