ಗುಜರಾತಿನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ; ಓರ್ವ ಮೃತ್ಯು

Bridge Collapse
Published on

ಅಹಮದಾಬಾದ್: ನಿರ್ಮಾಣ ಹಂತದ ಮೇಲ್ಸೇತುವೆಯೊಂದು ಕುಸಿದು ಬಿದ್ದು ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಗುಜರಾತಿನ ಭನಸ್​ಕಾಂತ ಜಿಲ್ಲೆ ಪಲನ್​ಪುರದಲ್ಲಿ ನಡೆದಿದೆ.

ಬ್ರಿಡ್ಜ್​ ಕುಸಿತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಕಳಪೆ ಕಾಮಗಾರಿ ಸೇತುವೆ ಕುಸಿತಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಕಳೆದ ಕೆಲ ತಿಂಗಳುಗಳಿಂದ ಸೇತುವೆ ನಿರ್ಮಾಣ ಹಂತದಲ್ಲಿತ್ತು. ಪಲನ್​ಪುರದಿಂದ ಅಂಬಾಜಿಗೆ ಸೇತುವೆ ಸಂಪರ್ಕ ಕಲ್ಪಿಸುತ್ತಿತ್ತು.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಸೇತುವೆ ಅಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ದುರ್ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net