ಕಾವೇರಿ ಆರತಿಗೆ ಚಾಲನೆ: ಈ ಜ್ಯೋತಿ ಇಡೀ ನಾಡನ್ನು ಬೆಳಗುತ್ತದೆ: DK ಶಿವಕುಮಾರ್

untitled-design-2025-09-26t222439459-68d6c567a42a2
Published on

ಶ್ರೀರಂಗಪಟ್ಟಣ (ಮಂಡ್ಯ): ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿಗೆ ಡಿಸಿಎಂDK ಶಿವಕುಮಾರ್ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಶುಕ್ರವಾರ ಸಂಜೆ ಚಾಲನೆ ನೀಡಿದರು.

10 ಸಾವಿರಕ್ಕೂ ಹೆಚ್ಚು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಸ್ಥಳೀಯ ಪುರೋಹಿತರ ತಂಡ ಆರತಿ ಬೆಳಗಿತು. ಆನಂತರ ವಾರಣಾಸಿಯಿಂದ ಬಂದಿದ್ದ 13 ಜನ ಪುರೋಹಿತರ ತಂಡ ಆರತಿ ಬೆಳಗಿತು. ನಾಡಿನ ಜೀವನದಿ, ನಮ್ಮೆಲ್ಲರ ತಾಯಿ ಕಾವೇರಿಗೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆರತಿ ಬೆಳಗುವ ಈ ದಿವ್ಯ ಕ್ಷಣವು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಡೆಯುವ ಗಂಗಾ ಆರತಿಯನ್ನೇ ಮೀರಿಸುವಂತೆ ಭಾವಿಸಿತು.

ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ

"ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ " ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

"ಸೂರ್ಯ, ಚಂದ್ರ, ಗಾಳಿಯಿಲ್ಲದೇ ನಾವುಗಳು ಬದುಕಲು ಸಾಧ್ಯವಿಲ್ಲ. ಪಂಚಭೂತಗಳಿಗೆ ಪ್ರತಿದಿನ ನಾವು ಪೂಜೆ ಮಾಡುತ್ತೇವೆ. ಅದೇ ರೀತಿ ರಾಜ್ಯದ ಹಳೇ ಮೈಸೂರು ಭಾಗದ ಜೀವನದಿಯಾಗಿ ಮೂರುವರೆ ಕೋಟಿ ಜನರು ಸೇರಿದಂತೆ ಪಕ್ಕದ ತಮಿಳುನಾಡು,‌ ಪಾಂಡಿಚೇರಿಯ ಜನರಿಗೆ ಜೀವನಾಧಾರವಾದ ಕಾವೇರಿಗೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ.‌ ಇಂದು ಬೆಳಗಿರುವ ಜ್ಯೋತಿ ಇಡೀ ರಾಜ್ಯವನ್ನು ಶಾಶ್ವತವಾಗಿ ಬೆಳಗುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net