

ನವದೆಹಲಿ: ನಾಪತ್ತೆಯಾಗಿದ್ದ ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣದ ಮಾಸ್ಟರ್ಮೈಂಡ್ನನ್ನು ಕೇಂದ್ರಿಯಾ ತನಿಖಾ ಸಂಸ್ಥೆ (CBI) ಅಧಿಕಾರಿಗಳು ಮಹಾರಾಷ್ಟ್ರದ ಪುಣೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಪೌಲುನ್ಮಾಂಗ್ (22) ಎಂದು ಗುರತಿಸಲಾಗಿದ್ದು, ಈತನೇ ವಿದ್ಯಾರ್ಥಿಗಳ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಗುವಾಹಟಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈತನನ್ನು ಅಕ್ಟೋಬರ್ 16ರವರೆಗೆ ಸಿಬಿಐ ವಶಕ್ಕೆ ನೀಡಲಾಗಿದೆ ಎಂದು ವರದಿಯಾಗಿದೆ.
ಕಾಣೆಯಾಗಿದ್ದ ವಿದ್ಯಾರ್ಥಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 1ರಂದು ಪಾವೊಮಿನ್ಲುನ್ ಹಾಕಿಪ್, ಮಲ್ಸಾವ್ನ್ ಹಾಕಿಪ್, ಲಿಂಗ್ನಿಚಾಂಗ್ ಬೈಟ್ ಮತ್ತು ತಿನ್ನೆಖೋಲ್ ಎಂಬುವವರನ್ನು ವಶಕ್ಕೆ ಪಡೆದಿತ್ತು.
ಜುಲೈ 6 ರಂದು ಮೈಟಿ ಸಮುದಾಯದ ಫಿಜಾಮ್ ಹೆಮ್‌ಜಿತ್ (20), ಹಿಜಾಮ್ ಲಿಂಥೋಯಿಂಗಂಬಿ (17) ಅಪಹರಿಸಿ ಸೆಪ್ಟೆಂಬರ್ 25ರಂದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಬ್ಬರು ಮೃತದೇಹದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.