ಸಿಬಿಐ, ಐಟಿ, ಇಡಿ ರಾಜಕೀಯ ಪಕ್ಷದ ಪರ ಕೆಲಸ ಮಾಡಬಾರದು: ಸಿಎಂ

cccc
Published on

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸಿಬಿಐ, ಇಡಿ, ಐಟಿ ಸೇರಿದಂತೆ ಯಾವುದೇ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕೇ ಹೊರತು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿಬಿಐ, ಐಟಿ, ಇಡಿ ಭೇದಭಾವ ಇಲ್ಲದೆ ಕೆಲಸ ಮಾಡಬೇಕು. ಆಗ ನ್ಯಾಯ ಸಿಗಲು ಸಾಧ್ಯ. ಇಡಿಯವರು ನನ್ನ ಹಾಗೂ ಡಿಸಿಎಂ ಹೆಸರು ಹೇಳುವಂತೆ ಒತ್ತಾಯ ಮಾಡಿದ್ದಾರೆ ಎಂದು ನಾಗೇಂದ್ರ ಅವರೇ ಹೇಳಿದ್ದಾರಲ್ಲವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯದಲ್ಲಿ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net