'ಸಿಬಿಐ ಮೇಲೆ ನಮಗೆ ಹಿಡಿತವಿಲ್ಲ' ಸುಪ್ರೀಂ ಕೋರ್ಟ್​ಗೆ ಕೇಂದ್ರ ಮಾಹಿತಿ

sc
Published on

ದೆಹಲಿ: ಸಿಬಿಐ ಮೇಲೆ ಯಾವುದೇ ನಿಯಂತ್ರಣವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಸಿಬಿಐ ತನಿಖೆ ವೇಳೆ ರಾಜ್ಯ ಸರ್ಕಾರ ಅನುಮತಿ ಪಡೆದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಸಂವಿಧಾನದ 131ನೇ ವಿಧಿಯಡಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯ ಸರ್ಕಾರವು ಸಿಬಿಐಗೆ ತನ್ನ ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆದಿದ್ದರೂ, ತನಿಖಾ ಸಂಸ್ಥೆ ಎಫ್‌ಐಆರ್ ದಾಖಲಿಸಿದೆ. ನಮ್ಮ ರಾಜ್ಯದಲ್ಲಿನ ಪ್ರಕರಣಗಳ ತನಿಖೆ ನಡೆಸುತ್ತಿದೆ ಎಂದು ಹೇಳಿತು.

ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರಿದ್ದ ಪೀಟಕ್ಕೆ ಕೇಂದ್ರ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸಂವಿಧಾನದ 131 ನೇ ವಿಧಿಯು ಸಂವಿಧಾನದ ಅತ್ಯಂತ ಪವಿತ್ರ ನ್ಯಾಯವ್ಯಾಪ್ತಿಯಾಗಿದೆ. ಅದರಲ್ಲಿ ಯಾವುದೇ ನಿಬಂಧನೆಗಳಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಪ್ರಕರಣಗಳನ್ನು ಕೇಂದ್ರ ಸರ್ಕಾರ ದಾಖಲಿಸಿಲ್ಲ, ಆದರೆ ಸಿಬಿಐ ದಾಖಲಿಸಿದೆ ಎಂದು ಸಾಲಿಸಿಟರ್ ಜನರಲ್ ಹೇಳಿದರು. ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದು, ಕೇಂದ್ರ ಸರ್ಕಾರದ ಕೈವಾಡವಿಲ್ಲ ಎಂದು ವಿವರಿಸಿದರು.

131 ನೇ ವಿಧಿಯು ಕೇಂದ್ರ ಮತ್ತು ರಾಜ್ಯಗಳ ಅಧಿಕಾರ ವ್ಯಾಪ್ತಿಯೊಂದಿಗೆ ವ್ಯವಹರಿಸುತ್ತದೆ. 2018 ರಲ್ಲಿ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರವು ರಾಜ್ಯದಲ್ಲಿ ಸಿಬಿಐ ತನಿಖೆಗೆ ಅನುಮತಿಯನ್ನು ಹಿಂತೆಗೆದುಕೊಂಡಿತು. ಹೀಗಾಗಿ ರಾಜ್ಯದಲ್ಲಿ ಸಿಬಿಐ ದಾಳಿ ನಿಂತಿದೆ. ಇತ್ತೀಚೆಗಷ್ಟೇ ಸಂದೇಶ್ ಖಲಿ ವಿವಾದ ರಾಜ್ಯ ರಾಜಕಾರಣವನ್ನು ಅಲ್ಲೋಲ ಕಲ್ಲೋಲ ಮಾಡುತ್ತಿರುವಾಗಲೇ ಇಡಿ ತಂಡ ದಾಳಿ ನಡೆಸಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ.

ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಅವಕಾಶ ನೀಡದಿದ್ದರೂ ಸಂದೇಶ್ ಖಾಲಿ ಪ್ರಕರಣವನ್ನು ಹೇಗೆ ತನಿಖೆ ಮಾಡುತ್ತಾರೆ ಎಂಬುದು ರಾಜ್ಯ ಸರ್ಕಾರದ ವಾದ. ಈ ಹಿನ್ನೆಲೆಯಲ್ಲಿ ದೀದಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net