

ಇಂಫಾಲ್: ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ವಯಸ್ಕರ ಕ್ರೂರ ಹತ್ಯೆ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಲು ಸಿಬಿಐ ತಂಡವು ನಾಳೆ ಮಣಿಪುರ ರಾಜಧಾನಿ ಇಂಫಾಲ್ಗೆ ಭೇಟಿ ನೀಡಲಿದೆ ಎಂದು ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ತಡರಾತ್ರಿ ಪೋಸ್ಟ್ನಲ್ಲಿ ಪ್ರಕಟಿಸಿದ್ದಾರೆ.
ಅಪರಾಧಿಗಳನ್ನು ಬಂಧಿಸಲು ಕೇಂದ್ರದ ಜತೆಗೆ ತಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಜನತೆಗೆ ಭರವಸೆ ನೀಡಿದ್ದಾರೆ. ಮಣಿಪುರದಲ್ಲಿ ಅಪಹರಣಕ್ಕೊಳಗಾಗಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ್ದು, ಯುವಕರ ಮೃತದೇಹಗಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರಿಂದ ಮಂಗಳವಾರ ಇಂಫಾಲ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿದಿದ್ದರಿಂದ ಹಿಂಸಾಚಾರ ಭುಗಿಲೆದ್ದಿತ್ತು.
ಈ ಸಂದರ್ಭ ಪೊಲೀಸರು ಲಾಠಿಚಾರ್ಜ್ ಮತ್ತು ಅಶ್ರುವಾಯು ಸಿಡಿಸಿದ್ದರಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಇದೀಗ ಅಲ್ಲಿನ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ,(ಏಜೆನ್ಸೀಸ್).