ಸಂದೇಶಖಾಲಿ ಹತ್ಯಾಕಾಂಡದ ತನಿಖೆ ನಡೆಸಲು ಸಿಬಿಐಗೆ ಹೈಕೋರ್ಟ್​ ಆದೇಶ

bjp sandesh khali
Published on

ಕೋಲ್ಕತ್ತಾ: ಸಂದೇಶಖಾಲಿ ಗ್ರಾಮದಲ್ಲಿ ನಡೆದ ಭೂಕಬಳಿಕೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲಿದೆ. ಈ ಸಂಬಂಧ ಕಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ.

ಸಂದೇಶಖಾಲಿ ಹತ್ಯಾಕಾಂಡದ ಕುರಿತು ನ್ಯಾಯಯುತ ತನಿಖೆಯ ಅಗತ್ಯವಿದೆ ಎಂದು ತಿಳಿಸಿದ ನ್ಯಾಯಾಲಯ ತನಿಖೆಯನ್ನು ಸಿಬಿಐಗೆ ವಹಿಸಿದೆ.

ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಕಿರುಕುಳದ ದೂರುಗಳನ್ನು ಸಂದೇಶಖಾಲಿ ಮಹಿಳೆಯರ ಗುಂಪು ಸಲ್ಲಿಸಿದ್ದು, ಅರ್ಜಿಯನ್ನು ಪರಿಗಣಿಸುವಾಗ ವಿಭಾಗೀಯ ಪೀಠದಿಂದ ಈ ತೀರ್ಪು ಬಂದಿದೆ.

ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯಿ ಭಟ್ಟಾಚಾರ್ಯ ಅವರನ್ನೊಳಗೊಂಡ ವಿಭಾಗೀಯ ಪೀಠ ಸಿಬಿಐ ತನಿಖೆಗೆ ನಿರ್ದೇಶನ ನೀಡಿದೆ. ಪ್ರಕರಣದಲ್ಲಿ ಸಂತ್ರಸ್ತರು ಮತ್ತು ಪ್ರತ್ಯಕ್ಷದರ್ಶಿಗಳ ಸುರಕ್ಷತೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ

ಮೀನು ಸಾಕಾಣಿಕೆಗೆ ಫಾರ್ಮ್‌ಗಳನ್ನು ಅನಧಿಕೃತವಾಗಿ ಬಳಸಿರುವ ಕುರಿತು ವರದಿಯನ್ನು ಸಲ್ಲಿಸುವಂತೆಯೂ ನ್ಯಾಯಾಲಯವು ಸಿಬಿಐಗೆ ಕೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net