

ನವದೆಹಲಿ: ಸಿಬಿಎಸ್ಇ 10ನೇ ತರಗತಿ ಕಂಪಾರ್ಟ್ಮೆಂಟ್ ಪರೀಕ್ಷಾ ಫಲಿತಾಂಶವನ್ನು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ಸೋಮವಾರ ಪ್ರಕಟಿಸಿದ್ದು, ಶೇ. 56.55 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಒಟ್ಟು 1,46,604 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 82,903 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಸಿಬಿಎಸ್ಇ ಕಂಪಾರ್ಟ್ಮೆಂಟ್ ಪರೀಕ್ಷಾ ಫಲಿತಾಂಶವನ್ನು ಆದಷ್ಟು ಬೇಗ ಪ್ರಕಟಿಸುವಂತೆ ಸುಪ್ರೀಂಕೋರ್ಟ್ ಕಳೆದ ತಿಂಗಳಲ್ಲಿ ನಿರ್ದೇಶನ ನೀಡಿತ್ತು.
ಮುಂದಿನ ಅಧ್ಯಯನಕ್ಕೆ ತೆರಳಲು ಅನುಕೂಲ ಆಗುವ ನಿಟ್ಟಿನಲ್ಲಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ ವಿಚಾರಣೆ ನಡೆಸಿದ್ದ ಕೋರ್ಟ್ ಈ ಆದೇಶವನ್ನು ನೀಡಿತ್ತು. (ಏಜೆನ್ಸೀಸ್)