ಸಿಬಿಎಸ್​ಇ 10 ಮತ್ತು 12ನೇ ತರಗತಿಯ ಪರೀಕ್ಷೆಗಳ ಮುಂದೂಡಿಕೆ

CBSC
Published on

ನವದೆಹಲಿ: ದೇಶದಲ್ಲಿ ಕರೊನಾ ವೈರಸ್​ ಸೋಂಕು ಹರಡುವ ಆತಂಕ ಹೆಚ್ಚಾದ ಹಿನ್ನೆಲೆ ಸಿಬಿಎಸ್​ಇ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಕಾಣುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಮಾರ್ಚ್​ 19ರಿಂದ ಮಾ.31ರವರೆಗೆ 10ನೇ ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮಂಡಳಿ ಆದೇಶವನ್ನು ಹೊರಡಿಸಿದೆ. ಮಾ.31ರ ನಂತರ ಪರೀಕ್ಷೆಗಳನ್ನು ನಡೆಸುವುದಾಗಿ ತಿಳಿಸಲಾಗಿದೆ. ಸದ್ಯದಲ್ಲೇ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಲಾಗಿದೆ.

ದೇಶ ಮತ್ತು ವಿದೇಶಗಳಲ್ಲಿ ಕರೊನಾ ವೈರಸ್​ ಸೋಂಕಿತರ ಸಂಖ್ಯೆಯಲ್ಲಿ ಪ್ರತಿದಿನ ಏರಿಕೆ ಕಾಣುತ್ತಿದೆ. ಪ್ರಪಂಚದಾದ್ಯಂತ 2 ಲಕ್ಷಕ್ಕೂ ಹೆಚ್ಚು ಜನರಲ್ಲಿ ಸೋಂಕಿರುವುದು ಧೃಡವಾಗಿದ್ದು, ದೇಶದಲ್ಲಿ 166 ಜನರು ಸೋಂಕಿನ ದಾಳಿಗೆ ಒಳಗಾಗಿದ್ದಾರೆ. ದೇಶದಲ್ಲಿ ಈವರೆಗೆ ಮೂರು ಸಾವು ಸಂಭವಿಸಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net