

ಬೆಂಗಳೂರು: ವೀಸಾ ಅವಧಿ ಮುಗಿದಿದ್ದರು ನಗರದಲ್ಲಿ ಅಕ್ರಮವಾಗಿ ವಾಸವಿರುವ ವಿದೇಶಿ ಪ್ರಜೆಗಳ ನಿವಾಸದ ಮೇಲೆ ಸಿಸಿಬಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಪಾಸ್‌ಪೋಟ್ ಮತ್ತು ವೀಸಾ ಅವಧಿ ಮುಗಿದ್ದಿದ್ದರೂ ಕೆಲ ವಿದೇಶಿ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ವಾಸವಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಬಾಣಸವಾಡಿ, ಸುಬ್ಬಯ್ಯಪಾಳ್ಯ, ಶಿವಾಜಿನಗರ ಮತ್ತು ರಾಮಮೂರ್ತಿ ನಗರದಲ್ಲಿ ವಾಸವಿರುವ ನೈಜಿರಿಯಾ ಮತ್ತು ಆಫ್ರಿಕಾ ಪ್ರಜೆಗಳ ಮನೆ ಮೇಲೆ
ದಾಳಿ ನಡೆಸಿದ ಸಿಸಿಬಿ ಪೊಲೀಸರು ಅವಧಿ ಮುಗಿದಿದ್ದ ವೀಸಾ ಮತ್ತು ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವೀಸಾ ಪಡೆದು ನಗರಕ್ಕೆ ಆಗಮಿಸುವ ಕೆಲ ವಿದೇಶಿಯರು ತಮ್ಮ ವೀಸಾ ಅವಧಿ ಮುಗಿದಿದ್ದರೂ ತಮ್ಮ ದೇಶಗಳಿಗೆ ಹಿಂದಿರುಗದೆ ಅಕ್ರಮವಾಗಿ ನೆಲೆಸಿ ಮಾದಕವಸ್ತು ಮಾರಾಟ ಮತ್ತು ಇನ್ನಿತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.