ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ; ಬ್ಲೇಡ್, ಚಾಕು ಸೇರಿ ಹಲವು ವಸ್ತುಗಳು ವಶಕ್ಕೆ| parappana-agrahara

Parappana Agrahara
Published on

ಬೆಂಗಳೂರು: ರಾಜ್ಯ ರಾಜಧಾನಿಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ಏಕಾಏಕಿ ದಾಳಿ ನಡೆಸಿ ಗಾಂಜಾ, ಬ್ಲೇಡ್, ಚಾಕು, ನಗದು ಹಣ ಸೇರಿ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಸಿಸಿಬಿ ತಂಡ ಜೈಲಿನಲ್ಲಿ ತೀವ್ರ ತಪಾಸಣೆ ನಡೆಸಿದ್ದು, ಕೈದಿಗಳ ಬಳಿಯಿಂದ ಅನೇಕ ಅಸಾಧಾರಣ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

(ಏಜೆನ್ಸೀಸ್)

ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಷೇಧಿತ ವಸ್ತುಗಳ ಬಳಕೆಯಾಗುತ್ತಿರುವ ಬಗ್ಗೆ ಸಿಸಿಬಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ದಾಳಿ ವೇಳೆ ಕಸೂರಿ ಮೇತಿ ಸೊಪ್ಪು, ಬೀಡಿ ಪ್ಯಾಕೆಟ್ಸ್, ಗಾಂಜಾ ಚಿಲ್ಲಂಸ್, ಮೊಳೆಗಳು, ಹರಿತವಾದ ವಸ್ತುಗಳು, ಗುಟ್ಕಾ ತಂಬಾಕು ಪ್ಯಾಕೆಟ್ಸ್, ಸುಣ್ಣದ ಡಬ್ಬಿ, ಚಾಕುಗಳು, ನಗದು ಹಣ, ಮೊಬೈಲ್ ಚಾರ್ಜರ್, ಕತ್ತರಿ, ಕಬ್ಬಿಣದ ರಾಡ್ ಪತ್ತೆಯಾಗಿವೆ.

ಸಿಸಿಬಿ ದಾಳಿ ವೇಳೆ ಅಪಾರ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ಪರಪ್ಪನ ಅಗ್ರಹಾರ ಕಾರಾಗೃಹದ ಸಜಾಬಂಧಿ ಬ್ಯಾರಕ್ ಹಾಗೂ ವಿಐಪಿ ಬ್ಯಾರಕ್‌ನಲ್ಲಿ ಸಿಸಿಬಿಯ ಐವತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net