ಜಾರಕಿಹೊಳಿ ಸಿಡಿ ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನರೇಶ್​ ಗೌಡ, ಶ್ರವಣ್..

CD
Published on

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ವಿವಾದಿತ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿರುವುದು ಬೆಳಕಿಗೆ ಬರುತ್ತಿದ್ದಂತೆ ಆ ಕುರಿತ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಇಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಪ್ರಕರಣದಲ್ಲಿ ನರೇಶ್​ ಗೌಡ ಹಾಗೂ ಶ್ರವಣ್ ಅವರ ಹೆಸರು ತಳುಕು ಹಾಕಿಕೊಂಡಿದ್ದು, ಇವರಿಬ್ಬರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ರಮೇಶ್​ ಜಾರಕಿಹೊಳಿ ಅವರಿಗೆ ಬ್ಲ್ಯಾಕ್​ಮೇಲ್ ಮಾಡಿರುವ ಸಂಬಂಧ ಇವರ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದರು.

ಇಂದು ಬೆಂಗಳೂರಿನ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಇವರಿಬ್ಬರ ಕಡೆಯಿಂದ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಆಗಿದೆ. ನ್ಯಾಯಾಲಯವು ಈ ಅರ್ಜಿಯ ವಿಚಾರಣೆಯನ್ನು ಮೇ 29ಕ್ಕೆ ನಿಗದಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net