ಎಲ್ಲ ರೀತಿಯ ಕಾರ್ಯಚರಣೆ ನಿಲ್ಲಿಸಲು ನಿರ್ಧಾರ​; ಇಂದಿನಿಂದಲೇ ಕದನ ವಿರಾಮ ಜಾರಿಗೆ;​ ಮೇ.12ರಂದು ಮಾತುಕತೆ: ವಿಕ್ರಮ್ ಮಿಶ್ರಿ

dk - 2025-05-10T185908.552
Published on

Ceasefire: ಭಾರತ ಮತ್ತು ಪಾಕಿಸ್ತಾನಗಳು ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ ಕೆಲವೇ ನಿಮಿಷಗಳ ಬಳಿಕ ಮಾತನಾಡಿರುವ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಮೇ.10ರ ಸಂಜೆ 5ರಿಂದಲೇ ಕದನ ವಿರಾಮ ಜಾರಿಗೆ ಬರುವಂತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ದೆಹಲಿಯ ವಿದೇಶಾಂಗ ಕಚೇರಿಯಲ್ಲಿ ಶನಿವಾರ ಸಂಜೆ ಮಾತನಾಡಿದರು. ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮಾಡಿದ್ದರ ಬಗ್ಗೆ ಮಾಹಿತಿ ಬಗ್ಗೆ ತಿಳಿಸಿದರು.

ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ಇಂದು ಮಧ್ಯಾಹ್ನ 3:35 ಕ್ಕೆ ಭಾರತೀಯ ಡಿಜಿಎಂಒಗೆ ಕರೆ ಮಾಡಿದ್ದರು. ಭಾರತೀಯ ಸಮಯ 17:00(5 ಗಂಟೆ) ಗಂಟೆಯಿಂದ ಜಾರಿಗೆ ಬರುವಂತೆ ಭೂಮಿ ಮತ್ತು ಆಕಾಶ ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ. ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12 ರಂದು ಮಧ್ಯಾಹ್ನ 12 ಗಂಟೆಗೆ ಮಾತನಾಡಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ಜೈ ಶಂಕರ್​ ಹೇಳಿದ್ದೇನು?

ಭಾರತ ಮತ್ತು ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆಯ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net