ಪರೀಕ್ಷೆಯ ವೇಳೆ ವಿದ್ಯಾರ್ಥಿ ಮೇಲೆ ಬಿದ್ದ ಸೀಲಿಂಗ್ ಫ್ಯಾನ್; ಆಡಳಿತ ಸಂಸ್ಥೆ ವಿರುದ್ಧ ಪ್ರತಿಭಟಿಸಿದ ಸ್ಟೂಡೆಂಟ್ಸ್

delhiuniversity
Published on

ನವದೆಹಲಿ: ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಯ ವೇಲೆ ಕಾಲೇಜಿನ ಸೀಲಿಂಗ್ ಫ್ಯಾನ್ ಬಿದ್ದು, ವಿದ್ಯಾರ್ಥಿ ಗಾಯಗೊಂಡಿರುವ ಘಟನೆ ನಡೆದಿದೆ.

ದೆಹಲಿಯ ಹಂಸರಾಜ್ ಕಾಲೇಜಿನಲ್ಲಿ ಪರೀಕ್ಷೆಯ ವೇಳೆ ಈ ಘಟನೆ ನಡೆದಿದೆ. ಸೀಲಿಂಗ್ ಫ್ಯಾನ್ ಬಿದ್ದು ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ನಡೆದಿದ್ದೇನು?: ಬಿಕಾಂ ಮೊದಲ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಕಾರ್ಯನಿರ್ವಹಿಸುತ್ತಿದ್ದ ಫ್ಯಾನ್ ಇದ್ದಕ್ಕಿದ್ದಂತೆ ವಿದ್ಯಾರ್ಥಿ ಮೇಲೆ ಬಿದ್ದ ನಂತರ ಉಳಿದವರು ಆಘಾತಕ್ಕೊಳಗಾಗಿದ್ದಾರೆ.

ಆಡಳಿತದ ನಿರ್ಲಕ್ಷ್ಯದ ವಿರುದ್ಧ ಆರ್‌ಎಸ್‌ಎಸ್‌ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿತು. ಕಾಲೇಜು ಆಡಳಿತ ಮಂಡಳಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎನ್ನಲಾಗಿದೆ.

"ನಮ್ಮ ಸಹಪಾಠಿಯ ಕಿವಿಯಲ್ಲಿ ರಕ್ತಸ್ರಾವವಾಗುವುದನ್ನು ನೋಡುವವರೆಗೂ ನಾವ್ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ" ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಕಾಲೇಜಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಘಟಕದ ಸದಸ್ಯರು ಪ್ರತಿಭಟನೆ ನಡೆಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net