ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ

sabhe (2)
ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಸಿಪಿಐ ಶ್ರೀಶೈಲಕುಮಾರ್ ಮಾತನಾಡಿದರು. ನಾಗರಾಜ್, ಸುನಿಲ್ ಇತರರಿದ್ದರು.
Published on

ಭದ್ರಾವತಿ: ಕಳೆದ ವರ್ಷದಂತೆ ಈ ಬಾರಿಯೂ ಗಣಪತಿ ಹಾಗೂ ಈದ್ ಮಿಲಾದ್ ಹಬ್ಬಗಳು ಒಟ್ಟಾಗಿ ಬಂದಿವೆ. ದಿನಾಂಕವನ್ನು ಹೊಂದಾಣಿಕೆ ಮಾಡಿಕೊಂಡು ಹಬ್ಬ ಆಚರಿಸುವಂತೆ ಡಿವೈಎಸ್ಪಿ ನಾಗರಾಜ್ ತಿಳಿಸಿದರು.

ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಶನಿವಾರ ಅಂಜುಮನ್ ಕಮಿಟಿ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದ ಅವರು, ಇತ್ತೀಚೆಗೆ ದೊಡ್ಡ ಸಭೆ, ಸಮಾರಂಭ, ಮೆರವಣಿಗೆಗಳಲ್ಲಿ ಕಾಲ್ತುಳಿತ ಪ್ರಕರಣಗಳಾಗುತ್ತಿವೆ. ಇಂತಹ ಅಚಾತುರ್ಯಗಳಿಗೆ ಯಾರೂ ಆಸ್ಪದ ನೀಡಬಾರದು ಎಂದು ಹೇಳಿದರು.

ಎಲ್ಲರೂ ಒಂದಾಗಿ ಎಚ್ಚರಿಕೆಯಿಂದ ಹಬ್ಬ ಆಚರಿಸಬೇಕು. ಇದಕ್ಕೆ ನಮ್ಮ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿಕೊಡುತ್ತೇವೆ. ಪ್ರಚೋದನಾಕಾರಿ ಹೇಳಿಕೆ ಇರುವಂತಹ ಬ್ಯಾನರ್‌ಗಳು ಹಾಗೂ ಪ್ಲೆಕ್ಸ್‌ಗಳನ್ನು ಹಾಕಬಾರದು. ನಗರಸಭೆ ಹಾಗೂ ಪೊಲೀಸ್ ಇಲಾಖೆಯ ಅನುಮತಿ ಪಡೆದು ಬ್ಯಾನರ್ ಅಳವಡಿಸಬೇಕು ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಸಂದೇಶಗಳನ್ನು ಹಾಕುವುದು ಹಾಗೂ ಮೆರವಣಿಗೆ ಸಂದರ್ಭದಲ್ಲಿ ಪೇಪರ್ ಬ್ಲಾಸ್ ಬ್ಲೋವರ್‌ಗಳನ್ನು ಬಳಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದರು. ನಗರ ಸಿಪಿಐ ಶ್ರೀಶೈಲಕುಮಾರ್, ಹಳೇ ನಗರ ಠಾಣೆ ಪಿಎಸ್‌ಐ ಸುನಿಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net