

ಮಳವಳ್ಳಿ: ಪಟ್ಟಣದ ಅನಂತರಾಂ ವೃತ್ತದಲ್ಲಿ ತಾಲೂಕು ಜೆಡಿಎಸ್ ವತಿಯಿಂದ ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ಜಿ ಶಾಸಕ ಡಾ.ಕೆ.ಅನ್ನದಾನಿ ನಾಡಪ್ರಭು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡಿದರು. ಇದೇ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಟಿ.ನಂದಕುಮಾರ್, ನಾಗೇಶ, ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ರವಿ, ಉಪಾಧ್ಯಕ್ಷ ಸಿದ್ದಾಚಾರಿ, ತಾಲೂಕು ಅಧ್ಯಕ್ಷ ವಿ.ಎಂ.ವಿಶ್ವನಾಥ್, ಯುವ ಘಟಕದ ಅಧ್ಯಕ್ಷ ಚಂದಳ್ಳಿ ಶ್ರೀಧರ್, ಎಸ್ಸಿ-ಎಸ್ಟಿ ಅಧ್ಯಕ್ಷ ಬೆಳಕವಾಡಿ ಕಾಂತರಾಜು, ಟೌನ್ ಅಧ್ಯಕ್ಷ ಪ್ರಭು, ಕಾರ್ಯಾಧ್ಯಕ್ಷ ಸಿ.ಎಂ.ಪುಟ್ಟಬುದ್ದಿ, ಮಹಿಳಾ ಘಟಕದ ಅಧ್ಯಕ್ಷೆ ಪದ್ಮಮ್ಮ, ಕಾರ್ಯಾಧ್ಯಕ್ಷೆ ಅನಿತಾ, ಕಾರ್ಯದರ್ಶಿ ನೇತ್ರಾ, ಗ್ರಾಪಂ ಮಹೇಶ್, ಮುಖಂಡರಾದ ದುಗ್ಗನಹಳ್ಳಿ ನಾಗರಾಜು ಸೇರಿದಂತೆ ಇತರರಿದ್ದರು. ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಿಸಲಾಯಿತು.