ನೇರಳಕುಪ್ಪೆ ವಿವಿಧೆಡೆ ಧ್ವಜಾರೋಹಣ ನೆರವೇರಿಸಿ ಸಂಭ್ರಮ

IMG-20240126-WA0292
ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಗೀತಾ ಸುರೇಶ್, ರುಕ್ಮಿಣಿ, ದೊಡ್ಡಸ್ವಾಮಿ ಇತರರಿದ್ದರು.
Published on

ಹನಗೋಡು: ಸಂವಿಧಾನವು ದೇಶದ ಸರ್ವೋಚ್ಛ ಕಾನೂನಾಗಿದ್ದು, ಸರ್ಕಾರದ ಕಾರ್ಯ ವಿಧಾನಗಳು, ನೀತಿಗಳು ಮತ್ತು ಅಧಿಕಾರವನ್ನು ಮಾರ್ಗದರ್ಶಿಸುವ ಚೌಕಟ್ಟಾಗಿದೆ ಎಂದು ನೇರಳಕುಪ್ಪೆ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಕುಮಾರಸ್ವಾಮಿ ತಿಳಿಸಿದರು.

ನೇರಳಕುಪ್ಪೆ ಪ್ರೌಢಶಾಲೆಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ಸರ್ಕಾರದ ವ್ಯವಸ್ಥೆಯೊಂದಿಗೆ 1950 ಜನವರಿ 26 ರಂದು ಸಂವಿಧಾನವನ್ನು ಜಾರಿಗೊಳಿಸಲಾಯಿತು. ರಾಜಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ತಿತ್ವವನ್ನು ಸ್ಥಾಪಿಸಿದ ದಿನ ಇದಾಗಿದೆ. ಈ ಕಾರಣಕ್ಕಾಗಿ ಇದು ಅತ್ಯಂತ ಮಹತ್ವದ ದಿನವಾಗಿದೆ ಎಂದು ಬಣ್ಣಿಸಿದರು.

ನೇರಳಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಸುರೇಶ್ ಮಾತನಾಡಿ, ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ, ಏಕತೆ, ಭ್ರಾತೃತ್ವ, ಭಾರತದ ಸಂವಿಧಾನದಲ್ಲಿರುವ ಪ್ರಮುಖ ಐದು ಮೌಲ್ಯಗಳಾಗಿವೆ. ಈ ದಿನ ಸ್ವಾತಂತ್ರ್ಯ ದಿನದಂತೆ ಗಣರಾಜ್ಯೋತ್ಸವದ ಆಚರಣೆಯಲ್ಲಿ ಪ್ರಮುಖ ರಾಷ್ಟ್ರೀಯ ಹಬ್ಬವಾಗಿದೆ ಎಂದು ತಿಳಿಸಿದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಮಹೇಶ್, ಗ್ರಾಪಂ ಮಾಜಿ ಉಪಾಧ್ಯಕ್ಷೆ ಜವರಮ್ಮ, ಶಾಲಾ ಶಿಕ್ಷಕರಾದ ಪ್ರೀತಿ, ಉಮಾ, ಲಕ್ಷ್ಮಣ, ಜಗದೀಶ್, ಪುನೀತ್, ಶಿವಕುಮಾರ್ ಹಾಗೂ ಶಾಲಾ ಎಸ್‌ಡಿಎಂಸಿ ಸದಸ್ಯರಾದ ಯೋಗೇಶ್, ಲಕ್ಷ್ಮಮ್ಮ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿರಿಯ ಪ್ರಾಥಮಿಕ ಶಾಲೆ: ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕ ದೊಡ್ಡಸ್ವಾಮಿ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಗೀತಾ ಸುರೇಶ್, ಉಪಾಧ್ಯಕ್ಷೆ ರುಕ್ಮಿಣಿ, ಮಾಜಿ ಉಪಾಧ್ಯಕ್ಷೆ ಜವರಮ್ಮ, ಶಿಕ್ಷಕರಾದ ಗಂಗರಾಜ್, ಛಾಯಾ ನಾಗೇಗೌಡ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಇದ್ದರು.

ಆಶ್ರಮ ಶಾಲೆ: ನೇರಳಕುಪ್ಪೆ ಸರ್ಕಾರಿ ಗಿರಿಜನ ಆಶ್ರಮ ಶಾಲೆಯಲ್ಲಿ ಮುಖ್ಯಶಿಕ್ಷಕ ಚೇತನ್ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕರಾದ ಕೆ ಕೆ ಸ್ವಾಮಿ, ಲೋಕೇಶ್ ಸೇರಿದಂತೆ ಇತರರು ಇದ್ದರು.

ಗ್ರಾಪಂ ಕಚೇರಿ: ನೇರಳಕುಪ್ಪೆ ಗ್ರಾಪಂ ಕಚೇರಿಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣವನ್ನು ಅಧ್ಯಕ್ಷೆ ಗೀತಾ ಸುರೇಶ ಹಾಗೂ ಪಿಡಿಒ ದೇವರಾಜ್ ನೆರವೇರಿಸಿದರು. ಉಪಾಧ್ಯಕ್ಷೆ ರುಕ್ಮಿಣಿ, ಸದಸ್ಯರಾದ ಜವರಮ್ಮ, ರಂಗಯ್ಯ, ಅಮಾಸೇಗೌಡ, ಮಾದೇಗೌಡ, ಸಣ್ಣಕ್ಕ ಸೇರಿದಂತೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net