ಗಣತಿ ಪ್ರಕ್ರಿಯೆ ಸಮರ್ಪಕವಾಗಿಲ್ಲ: ಎಚ್‌ಎಂಸಿ

chandrashekarappa
Published on

ಶಿವಮೊಗ್ಗ: ರಾಜ್ಯದಲ್ಲಿ ಜಾತಿ ಜನಗಣತಿ ವಿಚಾರ ಗೊಂದಲದ ಗೂಡಾಗಿದೆ. ಇದರಿಂದ ಬಹುತೇಕ ಜಾತಿಗಳಿಗೆ ನ್ಯಾಯ ಸಿಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರ ವೈಜ್ಞಾನಿಕವಾಗಿ ಗಣತಿ ಮಾಡಬೇಕು ಎಂದು ರಾಜ್ಯದ ಮಾಜಿ ಶಾಸಕರ ವೇದಿಕೆ ಅಧ್ಯಕ್ಷ ಎಚ್.ಎಂ. ಚಂದ್ರಶೇಖರಪ್ಪ ಒತ್ತಾಯಿಸಿದ್ದಾರೆ.

ಜಾತಿಗಣತಿ ಸಮರ್ಪಕವಾಗಿ ನಡೆಸಿಲ್ಲ. ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಿಲ್ಲ ಎಂಬುದು ಬಹುತೇಕರ ದೂರು. ಗಣತಿದಾರರು ಪ್ರತಿ ಮನೆಗೂ ತೆರಳಿ ಜಾತಿ ಹಾಗೂ ಜನರ ಆರ್ಥಿಕ ಸ್ಥಿತಿಗತಿಗಳನ್ನು ನಮೂದು ಮಾಡಬೇಕಿತ್ತು. ಈ ಪ್ರಕ್ರಿಯೆ ಸರಿಯಾಗಿ ನಡೆದಿದ್ದರೆ ಮಾತ್ರ ಎಲ್ಲರಿಗೂ ನ್ಯಾಯ ಸಿಗುವ ಅವಕಾಶಗಳಿತ್ತು ಎಂದು ಹೇಳಿಕೆ ನೀಡಿದ್ದಾರೆ.

ಕಾಂತರಾಜ ವರದಿ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲ ಧರ್ಮಗಳ ಧಾರ್ಮಿಕ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾಂತರಾಜ ವರದಿಯ ನೈಜತೆ ಹಾಗೂ ಅದರಲ್ಲಿನ ಅಂಕಿ ಅಂಶಗಳ ಬಗ್ಗೆ ಪ್ರಶ್ನಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net