ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ; ಸಿಎಂ ಪೂರ್ವಭಾವಿ ಸಭೆ|Centenary of Congress session at Belgaum

b (3)
Published on

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ(Centenary of Congress session at Belgaum) ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಶತಮಾನೋತ್ಸವದ ರೂಪುರೇಷೆ, ಸಿದ್ಧತೆ, ಜವಾಬ್ದಾರಿ ಹಂಚಿಕೆ ಕುರಿತು ಚರ್ಚಿಸಿದ ಸಿಎಂ ಹಲವು ಸಲಹೆ ಸೂಚನೆ ನೀಡಿದರು.

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಪರಮೇಶ್ವರ, ಎಚ್.ಕೆ.ಪಾಟೀಲ, ಕೆ ಜೆ ಜಾರ್ಜ್, ಕೆ. ಎಚ್.ಮುನಿಯಪ್ಪ, ಬೋಸರಾಜು, ಡಾ. ಎಂ.ಸಿ. ಸುಧಾಕರ್, ವೀರಪ್ಪ ಮೊಯಿಲಿ, ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ತಿಳಿಸಿದರು.

ಡಿ.26 ಮತ್ತು 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಸಮಾವೇಶ ನಡೆಯಲಿದೆ. ಸುವರ್ಣಸೌಧದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಯಲಿದೆ. ಎಲ್ಲ ಶಾಸಕರು ಪಕ್ಷ ಬೇಧ ಮರೆತು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಡಿ.26 ಸಂಜೆ 3ಕ್ಕೆ ದೆಹಲಿ ಎಲ್ಲ ನಾಯಕರು, ಎಐಸಿಸಿ ನಾಯಕರು ಆಗಮಿಸಲಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು 150 ಜನ ಸಂಸದರು ಆಗಮಿಸಲಿದ್ದಾರೆ. ಡಿ.27 ಬೆಳಗ್ಗೆ ಬೃಹತ್ ಬಹಿರಂಗ ಸಮಾವೇಶ ನಡೆಯಲಿದೆ. ಅನೇಕ ರಾಜ್ಯಗಳ ನಾಯಕರು ಈ ಸಮಾವೇಶದಲ್ಲಿ ಮಾತನಾಡುತ್ತಾರೆ. ಮಲ್ಲಿಕಾರ್ಜುನ್ ಖರ್ಗೆ ಅಧ್ಯಕ್ಷೆತೆಯಲ್ಲಿ ಈ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಸಿಎಂ ಸಿದ್ದಾರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಪೀಕರ್, ಸಭಾಪತಿ, ಪ್ರತಿಪಕ್ಷ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರು ಸ್ವ ಇಚ್ಛೆಯಿಂದ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net