

ಹಾವೇರಿ: ಆರೋಗ್ಯಕರ ಜೀವನಕ್ಕೆ ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಬಿ.ಆರ್. ಮುತಾಲಿಕದೇಸಾಯಿ ಹೇಳಿದರು.
ಇಲ್ಲಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ತಾಲೂಕಿನ ದೇವಗಿರಿ ಗ್ರಾಮದ ಅಂಗನವಾಡಿಯಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಪೋಷಣ ಪಕ್ವಾಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ ಆಲದತಿರ್ ಅಧ್ಯಕ್ಷತೆ ಮಾತನಾಡಿ, ಮಕ್ಕಳು ಹಾಗೂ ಪಾಲಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ರೂಪಿಸಿರುವ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅಪೌಷ್ಟಿಕತೆ ನಿರ್ವಹಣೆಗೆ ಸೂಕ್ತ ಕ್ರಮ, ಮಕ್ಕಳಲ್ಲಿ ಬೊಜ್ಜು ನಿವಾರಣೆ ಹಾಗೂ ಆರೋಗ್ಯಕರ ಜೀವನ ಶೈಲಿ ಚಟುವಟಿಕೆಗಳ ಕುರಿತು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿಲ್ಪಾ ಸಿದ್ದಮ್ಮನವರ ಉಪನ್ಯಾಸ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಐ.ಎ. ತಹಸೀಲ್ದಾರ್, ದೇವಗಿರಿ ಅಂಗನವಾಡಿ ಸಂರಕ್ಷಣಾಧಿಕಾರಿ ಶೋಭಾ ವನ್ನಳ್ಳಿ, ಹಿರಿಯ ಮೇಲ್ವಿಚಾರಕಿ ರೇಖಾ ನಾಡಿಗೇರ, ರೇಣುಕಾ ತಳವಾರ, ಹೊನ್ನಮ್ಮ ರೋಡಗೋಳಪ್ಪನವರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.