

ಬೆಂಗಳೂರು: ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಎರಡನೇ ಹಂತದಲ್ಲಿ ಲಾಕ್ಡೌನ್ ಜಾರಿ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ಕಡ್ಡಾಯವಾಗಿ ಅನುಸರಿಸಬೇಕಾದ ಮಾರ್ಗಸೂಚಿ ಹೊರಡಿಸಿದೆ. ಇದನ್ನು ಸಡಿಲಗೊಳಿಸದೆ ಚಾಚೂತಪ್ಪದೇ ಪಾಲಿಸುವಂತೆ ಎಲ್ಲ ಜಿಲ್ಲಾಡಳಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಮಾರ್ಗಸೂಚಿಯಲ್ಲಿ ಸೂಚಿಸಿರುವ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಪಾಲನೆಯಲ್ಲಿ ಲೋಪವಾದಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದೆಂದು ಎಲ್ಲ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಕಂದಾಯ ಇಲಾಖೆ ಎಚ್ಚರಿಸಿದೆ.
ಕೇಂದ್ರ ಗೃಹ ಇಲಾಖೆ ಹೇಳಿದ್ದೇನು?