

ತಿ.ನರಸೀಪುರ: ಕೇಂದ್ರ ಸರ್ಕಾರ ಎರಡನೇ ಅವಧಿಯ ಮೊದಲ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಸಾಧನೆಗಳ ಕುರಿತ ಕರಗಳನ್ನು ಕ್ಷೇತ್ರದ ಬಿಜೆಪಿ ಮುಖಂಡರು ಪಟ್ಟಣದ 23ನೇ ವಾರ್ಡ್‌ನಲ್ಲಿ ಮನೆ ಮನೆಗೆ ವಿತರಿಸಿದರು.
ಪುರಸಭಾ ಸದಸ್ಯ ಕೆ.ಕಿರಣ್ ಮಾತನಾಡಿ, ಪ್ರಧಾನಿ ಮೋದಿ ಅವರು ಜನರೇ ಪ್ರೇರಕ, ನಾನು ಪ್ರಧಾನ ಸೇವಕ ಎಂಬ ಧ್ಯೇಯ ವಾಕ್ಯದೊಂದಿಗೆ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೆ ಕರೊನಾ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ತರ ಹೆಜ್ಜೆಗಳನ್ನು ಕೈಗೊಳ್ಳುವ ಮೂಲಕ ವೈರಸ್ ನಿಯಂತ್ರಿಸುವಲ್ಲಿ ಯಶಸ್ವಿ ಆಗಿವೆ ಎಂದರು.
ಹಿರಿಯ ಮುಖಂಡ ಕರೋಹಟ್ಟಿ ಮಹದೇವಯ್ಯ, ಕ್ಷೇತ್ರಾಧ್ಯಕ್ಷ ಕೆ.ಸಿ.ಲೋಕೇಶ್, ಯುವ ಮೋರ್ಚಾ ಅಧ್ಯಕ್ಷ ಕೆ.ವಿ.ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಕೊತ್ತೇಗಾಲ ಕಿಟ್ಟಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಚೌಹಳ್ಳಿ ಸಿದ್ದರಾಜು, ಹಿಂದುಳಿದ ವರ್ಗಗಳ ಮೋರ್ಚಾದ ಮಾಜಿ ಜಿಲ್ಲಾ ಉಪಾಧ್ಯಕ್ಷ ಕೆ.ನಂಜುಂಡಸ್ವಾಮಿ, ಕರೋಹಟ್ಟಿ ಬಸವರಾಜು, ಎನ್.ಲೋಕೇಶ ಇತರರು ಹಾಜರಿದ್ದರು.