

ನವದೆಹಲಿ: ಬೆಂಗಳೂರು ಮತ್ತು ಮುಂಬಯಿ ನಡುವಿನ ನೂತನ ಸೂಪರ್ ಫಾಸ್ಟ್(Superfast Train) ರೈಲು ಸಂಚಾರಕ್ಕೆ ರೈಲ್ವೆ ಇಲಾಖೆಯು ಇದೀಗ ಗುರುವಾರ (ಅ.23) ಅನುಮೋದನೆ ನೀಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್,ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ ಧಾರವಾಡ ಹಾಗೂ ಬೆಳಗಾವಿ ಮೂಲಕ ಮುಂಬಯಿ ತಲುಪಲಿರುವ ನೂತನ ರೈಲು ಸಂಚಾರದ ವೇಳಾಪಟ್ಟಿಯನ್ನು ಶೀಘ್ರದಲ್ಲೇ ರೈಲ್ವೆ ಇಲಾಖೆ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಈ ಹೊಸ ರೈಲು ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮಾರ್ಗವಾಗಿ ಸಂಚರಿಸಲಿದೆ. ಇದು ರಾಜ್ಯದ ಅಭಿವೃದ್ಧಿಗೆ ಮತ್ತು ವಾಣಿಜ್ಯೋದ್ಯಮಕ್ಕೆ ಅನುಕೂಲವಾಗಲಿದೆ ಹಾಗೂ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಈ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದರು.