ಜಿಎಸ್​ಟಿ ಕಡಿಮೆಗೊಳಿಸಿರುವುದು ಬಡವರಿಗೆ ಅನುಕೂಲ; ಅರುಣಕುಮಾರ

oplus_0
oplus_0
Published on

ರಾಣೆಬೆನ್ನೂರ: ಕೇಂದ್ರ ಸರ್ಕಾರ ಬಡವರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಹಾಗೂ ಪ್ರತಿಯೊಬ್ಬರೂ ಎಲ್ಲ ವಸ್ತುಗಳನ್ನು ಅಗ್ಗದ ಬೆಲೆ ಖರೀದಿ ಮಾಡಬೇಕು ಎಂಬ ಉದ್ದೇಶದಿಂದ ದೇಶಾದ್ಯಂತ 375 ವಸ್ತುಗಳ ಮೇಲಿನ ಜಿಎಸ್​ಟಿ ಕಡಿಮೆಗೊಳಿಸಿ ಆದೇಶಿಸಿರುವುದು ಸ್ವಾಗತಾರ್ಹ ಎಂದು ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಜಿಎಸ್​ಟಿ ಕಡಿಮೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಬಡವರ, ರೈತಪರ ಸರ್ಕಾರವಾಗಿದೆ.

ಆದರೆ, ರಾಜ್ಯದಲ್ಲಿರುವ ಕಾಂಗ್ರೆಸ್​ ಸರ್ಕಾರ ಜಾತಿಗಣತಿ ಹೆಸರಿನಲ್ಲಿ ಹಿಂದು ಸಮಾಜ ಒಡೆಯುವ ಹುನ್ನಾರ ಮಾಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್​ ಸರ್ಕಾರಕ್ಕೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಪಕ್ಷದ ನಗರ ಟಕದ ಅಧ್ಯಕ್ಷ ಮಂಜುನಾಥ ಕಾಟಿ, ಪ್ರಮುಖರಾದ ಡಾ. ಬಸವರಾಜ ಕೇಲಗಾರ, ಭಾರತಿ ಜಂಬಗಿ, ಮಲ್ಲಣ್ಣ ಅಂಗಡಿ, ನಿಂಗರಾಜ ಕೋಡಿಹಳ್ಳಿ, ಚೋಳಪ್ಪ ಕಸವಾಳ, ಪರಮೇಶಪ್ಪ ಗೂಳಣ್ಣನವರ, ಪವನಕುಮಾರ ಮಲ್ಲಾಡದ, ಎ.ಬಿ. ಪಾಟೀಲ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net