ವಿವಾದಿತ ಅಧಿಕಾರಿ ಪೂಜಾ ಖೇಡ್ಕರ್​ ಅವರನ್ನು ಐಎಎಸ್‌ನಿಂದ ವಜಾಗೊಳಿಸಿದ ಕೇಂದ್ರ

Untitled-design-84
Published on

ನವದೆಹಲಿ: ಕೇಂದ್ರ ಸರ್ಕಾರವು ಮಾಜಿ ಟ್ರೈನಿ ಐಎಎಸ್​ ಅಧಿಕಾರಿ ಪೂಜಾ ಖೇಡ್ಕರ್​ ಅವರನ್ನು ಭಾರತೀಯ ಆಡಳಿತ ಸೇವೆಯಿಂದ (IAS) ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದೆ. ಐಎಎಸ್ (ಪ್ರೊಬೇಷನ್) ನಿಯಮಗಳು 1954ರ ನಿಯಮ 12ರ ಅಡಿಯಲ್ಲಿ ಸರ್ಕಾರವು ಈ ಕ್ರಮವನ್ನು ಕೈಗೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ (ಸೆಪ್ಟೆಂಬರ್​​ 7) ತಿಳಿಸಿವೆ.

ಈ ಹಿಂದೆ ಯುಪಿಎಸ್‌ಸಿ ಕೂಡ ಐಎಎಸ್ ಅಭ್ಯರ್ಥಿತ್ವವನ್ನು ರದ್ದುಗೊಳಿಸುವಾಗ ವಂಚನೆ ಪ್ರಕರಣವನ್ನು ದಾಖಲಿಸಿತ್ತು. ಯುಪಿಎಸ್​ಸಿ ಪರೀಕ್ಷೆ 2022ರ ಮೀಸಲಾತಿ ಪ್ರಯೋಜನಗಳನ್ನು ಪಡೆಯಲು ಪೂಜಾ ಖೇಡ್ಕರ್​​​ ಸುಳ್ಳು ಮಾಹಿತಿ ಒದಗಿಸಿದ್ದಾರೆ ಎಂದು ಆರೋಪಿಸಿ ಜುಲೈ 31 ರಂದು ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿತು. ಜತಗೆ ಭವಿಷ್ಯದಲ್ಲಿ ಯಾವುದೇ ಪರೀಕ್ಷೆಗಳಿಗೆ ಹಾಜರಾಗದಂತೆ ನಿರ್ಬಂಧಿಸಿತು.

ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ದುಷ್ಕೃತ್ಯದ ಬಗ್ಗೆ ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಲಾಗಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಪೂಜಾ ಖೇಡ್ಕರ್ ಅವರು CSE-2022 ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ ಎಂದು ಆಯೋಗ ತಿಳಿಸಿತ್ತು. ಖೇಡ್ಕರ್ ಅವರು ಇತರ ಹಿಂದುಳಿದ ವರ್ಗ (ಒಬಿಸಿ) ಮತ್ತು ಅಂಗವಿಕಲ ಕೋಟಾದ ಪ್ರಯೋಜನಗಳನ್ನು ತಪ್ಪಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಅಂಗವಿಕಲತೆ ತೋರಿಸಲು ಪೂಜಾ ಖೇಡ್ಕರ್ ಎರಡು ಪ್ರಮಾಣಪತ್ರಗಳನ್ನು ಪ್ರಸ್ತುತಪಡಿಸಿದ್ದಾರೆ. ಇವುಗಳಲ್ಲಿ ಒಂದು ನಕಲಿಯಾಗಿದ್ದರೆ ಇನ್ನೊಂದು ಕಪೋಲಕಲ್ಪಿತವಾಗಿರಬಹುದು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ದೆಹಲಿ ಹೈಕೋರ್ಟ್​​​ನಲ್ಲಿ ತಿಳಿಸಲಾಗಿದೆ. ಏಮ್ಸ್​​ನಲ್ಲಿ ತನ್ನ ಅಂಗವಿಕಲ ಪರೀಕ್ಷೆಗೆ ಸಿದ್ಧ ಎಂದು ಪೂಜಾ ಖೇಡ್ಕರ್​​ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪೂಜಾ ಖೇಡ್ಕರ್ ಅವರು ದೆಹಲಿ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 

ಈ ಹಿಂದೆ ನಾಗರಿಕ ಸೇವಾ ಪರೀಕ್ಷೆ(ಸಿಎಸ್​​ಇ)-2022ಕ್ಕೆ ತಾತ್ಕಾಲಿಕವಾಗಿ ಶಿಫಾರಸು ಮಾಡಲಾದ ಅಭ್ಯರ್ಥಿ ಪೂಜಾ ಮನೋರಮಾ ದಿಲೀಪ್ ಖೇಡ್ಕರ್ ಅವರ ದುಷ್ಕೃತ್ಯದ ಬಗ್ಗೆ ವಿವರವಾದ ಮತ್ತು ಸಂಪೂರ್ಣ ತನಿಖೆ ನಡೆಸಲಾಗಿದೆ. ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ ನಂತರ ಪೂಜಾ ಖೇಡ್ಕರ್ ಅವರು CSE-2022 ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ ಎಂದು ಆಯೋಗ ತಿಳಿಸಿತ್ತು.(ಏಜೆನ್ಸೀಸ್​​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net