ಸಿರಿಧಾನ್ಯ ಮೇಳ, ಫಲಪುಷ್ಪ ಪ್ರದರ್ಶನ

klr siri mela
ಸಿರಿಧಾನ್ಯ ಮೇಳ ಪ್ರದರ್ಶನದ ಪ್ರಯುಕ್ತ ಸಿರಿಧಾನ್ಯಗಳ ರಾಶಿ.
Published on

ಕೋಲಾರ: ಸಿರಿಧಾನ್ಯಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಲು ಜ.16ರಿಂದ 18ರವರೆಗೆ ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಸಾವಯುವ ಮೇಳ ಹಾಗೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ ಹೇಳಿದರು.

ಮೇಳ ಕುರಿತು ಮಾಹಿತಿ ನೀಡಿದ ಸುಮಾ, ಸಿರಿಧಾನ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತ ನಡಿಗೆ, ಸಿರಿಧಾನ್ಯಗಳ ವಿವಿಧ ಬಗೆಯ ತಿಂಡಿ-ತಿನಿಸುಗಳ ಹಾಗೂ ಮರೆತು ಹೋದ ಖಾದ್ಯ ತಯಾರಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ವಿಜೇತರಾದವರು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

3 ದಿನಗಳ ಕಾಲ ನಡೆಯುವ ಮೇಳದಲ್ಲಿ ಹಳ್ಳಿ ಸೊಗಡು ಮಾದರಿಯಲ್ಲಿ ಸಾಂಪ್ರದಾಯಿಕ ಗುಡಿಸಲು ಮನೆ, ದೇಸಿ ತಳಿ ಬೀಜಗಳ ಪ್ರದರ್ಶನ, ದಿಬ್ಬದಿಂದ ಕಣಿವೆವರೆಗೂ ಜಲಾನಯನ ಪ್ರದೇಶ, ಕೃಷಿಭಾಗ್ಯ, ನರೇಗಾ ಯೋಜನೆಯಡಿ ವಿವಿಧ ಕಾಮಗಾರಿಗಳ ಮಾದರಿಗಳ ಪ್ರದರ್ಶನ, ಕೃಷಿ ಮತ್ತು ಸಂಬಂಧಿತ ಇಲಾಖೆಗಳಿಂದ ಮಳಿಗೆಗಳನ್ನು ತೆರೆಯಲಾಗುವುದು. ಕೃಷಿ ಯಂತ್ರೋಪಕರಣ, ಹಾಗೂ ಸಿರಿಧಾನ್ಯ ಖಾದ್ಯಗಳ ಪ್ರದರ್ಶನದಲ್ಲಿ 100ಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೃಷಿ ಪರಿಕರಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಎಂ.ಮಲ್ಲೇಶ್ ಬಾಬು, ಶಾಸಕ ಕೊತ್ತೂರು ಜಿ.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಸಮೃದ್ಧಿ ಮಂಜುನಾಥ್, ರೂಪಕಲಾ, ಎಂಎಲ್ಸಿಗಳಾದ ನಜೀರ್ ಅಹಮದ್, ಇಂಚರಾ ಗೋವಿಂದರಾಜು, ಎಂ.ಎಲ್.ಅನಿಲ್ ಕುಮಾರ್, ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ರವಿ, ಜಿ.ಪಂ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಎಸ್ಪಿ ಬಿ.ನಿಖಿಲ್ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net