ಶರನ್ನವರಾತ್ರಿ ಉತ್ಸವಕ್ಕೆ ತೆರೆ

2SPT6
ಸೋಮವಾರಪೇಟೆ ಸೋಮವೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಪೂಜಿಸಿದ್ದ ದೇವಿಯ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ, ಪಟ್ಟಣದಲ್ಲಿ ಮೆರವಣಿಗೆ ಮಾಡಲಾಯಿತು.
Published on

ಸೋಮವಾರಪೇಟೆ: ಪಟ್ಟಣದ ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವಕ್ಕೆ ಗುರುವಾರ ವಿಧ್ಯುಕ್ತ ತೆರೆ ಕಂಡಿತು. 10 ದಿನಗಳವರೆಗೆ ಶ್ರೀ ಪಾರ್ವತಿಗೆ ವಿಶೇಷ ಪೂಜೆ ನೆರವೇರಿತು.

ಗುರುವಾರ ಸಂಜೆ ದೇವಿಯ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ, ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮಹಿಳೆಯರಾಧಿಯಾಗಿ ಭಕ್ತಾದಿಗಳು ಪಾಲ್ಗೊಂಡಿದ್ದರು. ಸಿಂಗಾರಿ ಮೇಳ, ಡೊಳ್ಳು ಕುಣಿತ ಜನರನ್ನು ಅಕರ್ಷಿಸಿತು. ಸಂಜೆ ಆನೆಕೆರೆಯಲ್ಲಿ ಉತ್ಸವ ಮೂರ್ತಿಯನ್ನು ವಿಸರ್ಜಿಸಲಾಯಿತು. ಪದಾಧಿಕಾರಿಗಳಾದ ದೇವಾಲಯ ಸಮಿತಿ ಅಧ್ಯಕ್ಷ ನಂದ, ಮಾಜಿ ಅಧ್ಯಕ್ಷ ಶ್ರೀನಿವಾಸ್, ಎಸ್.ಆರ್.ಸೋಮೇಶ್, ಪ್ರಮುಖರಾದ ಹಾಲೇರಿ ದಿನೇಶ್, ಜಗದೀಶ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net