ಸಿಇಟಿ: ಪ್ರವೇಶ ಪತ್ರ ಡೌನ್‌ಲೋಡ್ ಆರಂಭ

kea
Published on

ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೇ 18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರವೇಶ ಪತ್ರವನ್ನು ಬುಧವಾರ ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳು, ಕೆಇಎ ವೆಬ್ಸೈಟ್ ಠಿಠಿ://ಛಿ.್ಞಜ್ಚಿ.ಜ್ಞಿ ಯುಜಿಸಿಇಟಿ-24 ಲಿಂಕ್‌ನಲ್ಲಿ ಕ್ಲಿಕ್ ಮಾಡಿ ತಮ್ಮ ಅರ್ಜಿಯ ಸಂಖ್ಯೆ, ಹೆಸರು ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

ಇಂಜಿನಿಯರಿಂಗ್ ಸೇರಿ ಕೆಇಎ ನಡೆಸುವ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯನ್ನು 3.28 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಏ.20ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೂ ಇದೇ ಪ್ರವೇಶ ಪತ್ರ ಅನ್ವಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net