ಸಿಇಟಿ: ಯೋಗ ಕೋರ್ಸ್‌ಗಳಿಗೂ ಆಪ್ಷನ್ ಎಂಟ್ರಿ ಆರಂಭ

yoga
Published on

ಬೆಂಗಳೂರು ಪ್ರತಿ ವರ್ಷ ತಡವಾಗಿ ನಡೆಸುತ್ತಿದ್ದ ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಪ್ರಕಟವಾಗಿದ್ದು, ಈ ಕೋರ್ಸ್‌ಗಳಿಗೂ ಅಭ್ಯರ್ಥಿಗಳು ಆಯ್ಕೆಗಳನ್ಜು ದಾಖಲಿಸಬಹುದಾಗಿದೆ.

ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ.

ಆಪ್ಷನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಯುಜಿಸಿಇಟಿ-24ರ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ನ್ಯಾಚುರೋಪಥಿ- ಯೋಗ, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ (ಇಚ್ಛೆ) ಗಳನ್ನು ದಾಖಲಿಸಲು ಮತ್ತಷ್ಟು ದಿನ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಮೊದಲು ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಏಳು ದಿನ ಅವಕಾಶ ನೀಡಿದ್ದು ಅದು ಇವತ್ತಿಗೆ ಕೊನೆ ಆಗಬೇಕಿತ್ತು. ಸಾರ್ವಜನಿಕರ ಮನವಿ ಮೇರೆಗೆ ಮತ್ತೂ ಅವಕಾಶ ನೀಡಿದ್ದು ಅಭ್ಯರ್ಥಿಗಳು ಎಚ್ಚರಿಕೆಯಿಂದ ಇಚ್ಛೆಗಳನ್ನು ದಾಖಲು ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net