ಲೋಕ ಫಲಿತಾಂಶಕ್ಕೂ ಮೊದಲೇ ಸಿಇಟಿ ರಿಸಲ್ಟ್

CET
Published on

ಬೆಂಗಳೂರು ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಯ ಫಲಿತಾಂಶವು ಜೂನ್ 1 ಅಥವಾ 3ರಂದು ಪ್ರಕಟವಾಗುವ ಸಾಧ್ಯತೆಗಳಿವೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏ.18 ಮತ್ತು 19ರಂದು ನಡೆಸಿರುವ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಸಂಪೂರ್ಣವಾಗಿ ಮುಗಿದಿದ್ದು, ಫಲಿತಾಂಶ ಪ್ರಕಟಿಸುವುದಷ್ಟೇ ಬಾಕಿ ಇದೆ.

ದ್ವಿತೀಯ ಪಿಯುಸಿಯ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳು ಪಡೆದ ಶೇ 50ರಷ್ಟು ಅಂಕಗಳನ್ನು ಸೇರಿಸಿಯೇ ಸಿಇಟಿ ರ‌್ಯಾಂಕ್ ಪಟ್ಟಿಯನ್ನು ಪ್ರಕಟಿಸಬೇಕಾಗುತ್ತದೆ. ಇದಕ್ಕಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

ಬಿಎಸ್ಸಿ ಕೃಷಿ ಪದವಿಗೆ ಪ್ರವೇಶ ನೀಡಲು ಕೃಷಿ ವಿಶ್ವವಿದ್ಯಾಲಯ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ನಿಗದಿ ಮಾಡಿದ್ದು, ಮೇ 30ರಂದು ಲಿತಾಂಶ ಪ್ರಕಟಿಸಲಿದೆ. ಅದಾದ ಒಂದೆರಡು ದಿನಗಳಲ್ಲಿ ಸಿಇಟಿ ಲಿತಾಂಶ ಪ್ರಕಟಿಸಲಾಗುತ್ತದೆ ಎನ್ನುತ್ತಾರೆ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-2ರ ಲಿತಾಂಶವು ಮೇ 21ರಂದು ಪ್ರಕಟವಾಗುತ್ತಿದೆ. ಆದ್ದರಿಂದ ಜೂನ್ ಮೊದಲ ವಾರದಲ್ಲಿಯೇ ಲಿತಾಂಶ ಪ್ರಕಟವಾಗುವ ಸಾಧ್ಯತೆಗಳಿವೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ 3-4 ದಿನಗಳಲ್ಲಿ ಸಿಇಟಿ ಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಪಿಯುಸಿ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. - ಪ್ರಸನ್ನ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net