

ಬೆಂಗಳೂರು: ವಿಶ್ವ ಕಂಡ ಶ್ರೇಷ್ಠ ಆರ್ಥಿಕ ತಜ್ಞ, ಉದಾರ ಆರ್ಥಿಕ ನೀತಿಯ ಹರಿಕಾರ ಹಾಗೂ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶೋಕ ಸಂದೇಶದಲ್ಲಿ ಅವರು, ದೇಶದ ಪ್ರಧಾನಿಯಾಗಿ 2004ರಿಂದ 2014ರವರೆಗೆ ದೇಶವನ್ನು ಮುನ್ನಡೆಸಿದ್ದ ಮನಮೋಹನ್ ಸಿಂಗ್, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ನಂತರ ಅತಿಹೆಚ್ಚು ಅವಧಿಗೆ ಪ್ರಧಾನಿಯಾಗಿ ಕೆಲಸ ನಿರ್ವಹಿಸಿದ ಹಿರಿಮೆ ಹೊಂದಿದ್ದರು,