ಚಳ್ಳಕೆರೆ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ಗೆಲುವು

ts raghumurty
Published on

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತ ಏಣಿಕೆ ಕಾರ್ಯ ನಡೆಯುತ್ತಿದ್ದು, ಚಳ್ಳಕೆರೆ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ಗೆಲುವನ್ನು ಸಾಧಿಸಿದ್ದಾರೆ. ಈ ಮೂಲಕ ಕೈ ಅಭ್ಯರ್ಥಿ ಟಿ.ರಘುಮೂರ್ತಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ.

ಚಳ್ಳಕೆರೆಯಿಂದ 3ನೇ ಸಲ ಗೆಲುವು ಸಾಧಿಸಿದ ಕೈ ಅಭ್ಯರ್ಥಿ 16127 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ 67363 ಪಡೆದ ಮತಗಳನ್ನು ಪಡೆಯುವ ಮೂಲಕ ಗೆಲುವನ್ನು ದಾಖಲಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ 51236 ಮತಗಳನ್ನು ಪಡೆದರೆ, ಪಕ್ಷೇತರ ಅಭ್ಯರ್ಥಿ ಕೆ.ಟಿ.ಕುಮಾರಸ್ವಾಮಿ 28928 ಮತಗಳನ್ನು ಹಾಗೂ ಬಿಜೆಪಿ ಅಭ್ಯರ್ಥಿ ಅನಿಲ್‌ಕುಮಾರ್ 22732 ಮತಗಳನ್ನು ಪಡೆದಿದ್ದಾರೆ.

ಈ ಬಾರಿ ಶೇ.73.19 ದಾಖಲೆಯ ಮತದಾನವಾಗಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ನಾನಾ ರೀತಿಯ ಲೆಕ್ಕಾಚಾರಕ್ಕಗಳು ನಡೆದಿದ್ದವು. ಅಲ್ಲದೇ, ಸರ್ಕಾರವನ್ನು ರಚಿಸಲು ಯಾವುದೇ ಪಕ್ಷ 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಸಮ್ಮಿಶ್ರ ಸರ್ಕಾರ ರಚನೆಯಾಗಲಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net