6ರಂದು ಬೆಂಗಳೂರು ಚಲೋ

03NGD15
ನಂಜನಗೂಡಿನ ಎಪಿಎಂಸಿ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರ ಸಭೆ ನಡೆಯಿತು.
Published on

ನಂಜನಗೂಡು: ಪ್ರಸಕ್ತ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ರೈತರ ಹಕ್ಕೊತ್ತಾಯಗಳಿಗೆ ಆದ್ಯತೆ ನೀಡಬೇಕೆಂಬ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಫೆ.6 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ತಿಳಿಸಿದ್ದಾರೆ.

ನಗರದ ಎಪಿಎಂಸಿ ಸಭಾಂಗಣದಲ್ಲಿ ಶುಕ್ರವಾರ ಸಂಘದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಬ್ಬು ಕಟಾವು ಸಾಗಣೆ ದರವನ್ನು ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿದ್ದು, ಹೆಚ್ಚುವರಿ ಹಣವನ್ನು ರೈತರಿಗೆ ವಾಪಸ್ ಕೊಡಿಸಬೇಕು. ಜತೆಗೆ ರೈತರ ಬೆಳೆ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರು ಚಲೋ ಕೈಗೊಳ್ಳಲಾಗಿದೆ ಎಂದರು.

ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ್, ಜಿಲ್ಲಾ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ಮಾರ್ಬಳ್ಳಿ ನೀಲಕಂಠಪ್ಪ, ತಾಲೂಕು ಅಧ್ಯಕ್ಷ ದೇವನೂರು ವಿಜೇಂದ್ರ, ಮಹಿಳಾ ಅಧ್ಯಕ್ಷೆ ಕಮಲಮ್ಮ, ಅಂಬಳೆ ಮಂಜುನಾಥ್, ಮಲ್ಲೇಶ್, ಪಾಪಣ್ಣ, ದೇವನೂರು ಘಟಕದ ಅಧ್ಯಕ್ಷ ಸುರೇಶ್, ರವಿ, ಗುರು, ಡಿ.ಪಿ. ಮಾದೇವಸ್ವಾಮಿ, ನಾಗೇಂದ್ರ ಸ್ವಾಮಿ, ಡಿ.ಪಿ.ಉಮೇಶ್, ಅಳಗಂಚಿ ಮಹೇಂದ್ರ, ಚುಂಚುರಾಯನಹುಂಡಿ ಗಿರೀಶ್, ತಗಡೂರು ಮಹದೇವಸ್ವಾಮಿ, ಮಹದೇವಪ್ಪ, ಡಿ.ಜಿ.ಉಮೇಶ್, ಗೀತಾ, ಉಡಿಗಾಲ ಗುರುಪ್ರಸಾದ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net