ದಂಟಳ್ಳಿ ದೊಡ್ಡಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ

04 HANUR 2 (2)
Published on

ಹನೂರು: ತಾಲೂಕಿನ ದಂಟಳ್ಳಿ ಗ್ರಾಮದ ದೊಡ್ಡಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು ಜನರನ್ನು ಆತಂಕಕ್ಕೀಡು ಮಾಡಿದೆ. ಕುರಟ್ಟಿಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಂಟಳ್ಳಿ ಗ್ರಾಮದ ದೊಡ್ಡಕೆರೆಯಲ್ಲಿ ಕಳೆದ 15 ದಿನಗಳಿಂದ ಮೊಸಳೆಯೊಂದು ಅಗಾಗ್ಗೆ ಕಾಣಿಸಿಕೊಳ್ಳುತ್ತಿದ್ದು, ಕೆರೆ ಏರಿಗೂ ಆಗಮಿಸುತ್ತಿದೆ.
ಜನರಲ್ಲಿ ಭಯದ ವಾತವರಣ ಉಂಟು ಮಾಡಿದ್ದು, ಕೆರೆ ಸಮೀಪಕ್ಕೆ ಹೋಗಲು ಹೆದರುವಂತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಅನಾಹುತ ಸಂಭವಿಸುವುಕ್ಕೆ ಮೊದಲು ಮೊಸಳೆಯನ್ನು ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net