ರಸ್ತೆಗಳು ಅಭಿವೃದ್ಧಿಯ ಪ್ರತೀಕ

02raju3
Published on

ಚಾಮರಾಜನಗರ: ಗ್ರಾಮೀಣ ರಸ್ತೆಗಳು ಗ್ರಾಮೀಣಾಭಿವೃದ್ಧಿಯ ಪ್ರತೀಕವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.


ತಾಲೂಕಿನ ಬಂದೀಗೌಡನ ಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು, ಕುಡಿಯುವ ನೀರು, ಸಮುದಾಯ ಭವನ ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಪೂರಕವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ರಸ್ತೆಗಳು ಗ್ರಾಮೀಣ ಜೀವನಾಡಿಯಾಗಿದ್ದು, ವಾಹನ ಸವಾರರಿಗೆ ಉತ್ತಮ ರಸ್ತೆಗಳು ಅಗತ್ಯವಾಗಿದೆ. ಇದನ್ನು ಮನಗಂಡು ವಿವಿಧ ಯೋಜನೆಗಳ ಅನುದಾನ ಬಳಸಿಕೊಂಡು ರಸ್ತೆ, ಚರಂಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದರು.


ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪುಟ್ಟಸ್ವಾಮಿ, ಮುಖಂಡರಾದ ಬಿಸಲವಾಡಿ ರವಿ, ನಾಗರಾಜು, ಪ್ರಭುಸ್ವಾಮಿ, ಅಶೋಕ್, ಎಪಿಎಂಸಿ ಸದಸ್ಯ ಶಿವಕುಮಾರ್, ನಾರಾಯಣ್‌ನಾಯಕ್, ಚನ್ನಂಜಪ್ಪ, ಇಂಜಿನಿಯರ್ ಮಧುಸೂದನ್ ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net