

ಚಾಮರಾಜನಗರ : ಕಳೆದ ವಾರದಿಂದ ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಿಂತ ನೀರಿನಿಂದ ಉತ್ಪತ್ತಿಯಾಗುವ ಡೆಂೆ ರೋಗವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ.
ಜಿಲ್ಲೆಯಲ್ಲಿ ಈ ವರ್ಷದಲ್ಲಿ ಯಾವುದೇ ಡೆಂೆ ಪ್ರಕರಣಗಳು ದಾಖಲಾಗಿಲ್ಲ. ಆದರೆ, ಕಳೆದ ವರ್ಷದಲ್ಲಿ ಮಳೆಗಾಲಕ್ಕೂ ಮುನ್ನ ಚಾಮರಾಜನಗರ ಪಟ್ಟಣ ಪ್ರದೇಶ ಹಾಗೂ ಸಂತೇಮರಹಳ್ಳಿ ಭಾಗದಲ್ಲಿ ಅನೇಕ ಡೆಂೆ ಪ್ರಕರಣಗಳು ಕಾಣಿಸಿಕೊಂಡು ಜನರು ಆತಂಕಕ್ಕೆ ಒಳಗಾಗಿದ್ದರು. ಈ ನಿಟ್ಟಿನಲ್ಲಿ ಮಳೆಗಾಲ ಸಮೀಪಿಸುತ್ತಿರುವ ಮುಂಚೆಯೇ ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯೋನ್ಮುಖವಾಗಿ ಕೆಲಸ ಮಾಡುತ್ತಿದ್ದು, ಸಂಪೂರ್ಣವಾಗಿ ಡೆಂೆ ಬಾರದಂತೆ ತಡೆಯಲು ಸಿದ್ಧವಾಗಿದೆ.
ವರ್ಷವಿಡೀ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ನಿರಂತರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ. ಡೆಂೆ ಮತ್ತು ಚಿಕೂನ್ ಗುನ್ಯಾ ಕಾಯಿಲೆಗೆ ಕಾರಣವಾಗುವ ಈಡಿಸ್ ಸೊಳ್ಳೆಯ ಮೊಟ್ಟೆ ಮರಿ ಮಾಡಲು ಅನುಕೂಲವಾಗದಂತೆ ನೀರು ಸಂಗ್ರಹ ಆಗದಂತೆ ನೋಡಿಕೊಳ್ಳಲು ಸಾರ್ವಜನಿಕರಿಗೆ ಆಗಾಗ್ಗೆ ಸೂಚನೆ ಮತ್ತು ಸಲಹೆಗಳನ್ನು ನೀಡುತ್ತಿದ್ದಾರೆ.
ಜಿಲ್ಲೆಯ ಪಟ್ಟಣ ಪ್ರದೇಶಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡೆಂೆ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳ ವಿರುದ್ಧ ನಿರಂತರವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಬರುವುದು ಸಾಮಾನ್ಯ. ಅದರಲ್ಲೂ ಮಳೆನೀರು ಅಥವಾ ಇನ್ನಿತರ ನೀರು ಸಂಗ್ರಹವಾದ ಜಾಗದಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳು ಅನೇಕ ರೋಗಗಳನ್ನು ಉಂಟು ಮಾಡುತ್ತದೆ. ಈ ಕಾರಣಕ್ಕೆ ಮಳೆಗಾಲಕ್ಕೂ ಮುನ್ನವೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ನಿರಂತರವಾಗಿ ಡೆಂೆ ವಿರುದ್ಧ ಜಾಗೃತಿ ಮೂಡಿಸಲಾಗುತ್ತಿದೆ. ಸಂಪೂರ್ಣವಾಗಿ ಡೆಂೆ ಮುಕ್ತವಾಗಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಚಿದಂಬರ ವಿಜಯವಾಣಿಗೆ ಮಾಹಿತಿ ನೀಡಿದರು.
ನಿರಂತರ ಲಾರ್ವಾ ಸಮೀಕ್ಷೆ:
ಜಿಲ್ಲೆಯಲ್ಲಿ ಡೆಂೆ ಸಾಂಕ್ರಾಮಿಕ ರೋಗಕ್ಕೆ ಕಾರಣವಾಗಿರುವ ಈಡಿಸ್ ಸೊಳ್ಳೆ ಉತ್ಪತ್ತಿಯಾಗದಂತೆ ತಡೆಯಲು ಈಡಿಸ್ ಲಾರ್ವಾ ಸಮೀಕ್ಷೆ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಆಶಾ ಮತ್ತು ಆರೋಗ್ಯ ಕಾರ್ಯಕರ್ತರು ಹಾಗೂ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ 15 ದಿನಗಳಿಗೊಮ್ಮೆ ಪ್ರತಿ ಮನೆಗೂ ಭೇಟಿ ನೀಡಿ ಲಾರ್ವಾ ಸರ್ವೇ ಮಾಡುತ್ತಿದ್ದಾರೆ. ಪಟ್ಟಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ 1ನೇ ಶುಕ್ರವಾರ ಮತ್ತು 3ನೇ ಶುಕ್ರವಾರ ಸರ್ವೇ ಕಾರ್ಯ ನಡೆಸುತ್ತಾ ಬಂದಿದ್ದಾರೆ.
ಮುಂದಿನ ನಾಲ್ಕು ತಿಂಗಳಲ್ಲಿ ಮಳೆಗಾಲ ಇರುವುದರಿಂದ ಹೆಚ್ಚಿನ ಸರ್ವೇ ಮಾಡಲಾಗುತ್ತದೆ. ಪಟ್ಟಣ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳ ಪ್ರತಿಯೊಂದು ಮನೆಗಳಿಗೂ ಭೇಟಿ ಮನೆ ಒಳಗೆ ಹಾಗೂ ಹೊರಗೆ ನೀರಿನ ತೊಟ್ಟಿಗಳನ್ನು ಪರೀಕ್ಷಿಸಿ ಲಾರ್ವಾ ಕಂಡು ಬಂದರೆ ಆ ತೊಟ್ಟಿಯ ನೀರನ್ನು ಖಾಲಿ ಮಾಡಿಸಲಾಗುತ್ತಿದೆ. ಜತೆಗೆ ಸ್ವಚ್ಛಗೊಳಿಸಿ, ಒಣಗಿಸಿ ಮತ್ತೆ ಉಪಯೋಗಿಸಲು ತಿಳಿಸಲಾಗುತ್ತಿದೆ. ಬಳಸದ, ಖಾಲಿ ಮಾಡಲಾಗದ ನೀರು ಶೇಖರಣಾ ಸಂಗ್ರಹಗಳಿಗೆ ಲಾರ್ವಾ ನಾಶಕ ದ್ರಾವಣ ಸಿಂಪಡಿಸಲಾಗುತ್ತಿದೆ. ಈ ಮೂಲಕ ಡೆಂೆ ತಡೆಗಟ್ಟಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಸೊಳ್ಳೆಯಿಂದ ಬರುವ ಕಾಯಿಲೆ:
ಈಡಿಸ್ ಎಂಬ ಸೊಳ್ಳೆಯಿಂದ ಈ ಕಾಯಿಲೆ ಬರುತ್ತದೆ. ಡೆಂೆ ಜ್ವರ ಸೋಂಕಿತ ವ್ಯಕ್ತಿಯನ್ನು ಸೊಳ್ಳೆ ಕಚ್ಚಿದಾಗ, ಆ ಮನುಷ್ಯನಲ್ಲಿರುವ ವೈರಸ್ ಸೊಳ್ಳೆಯ ದೇಹದೊಳಗೆ ಸೇರಿ ಅದೇ ಸೊಳ್ಳೆ ಆರೋಗ್ಯವಂತ ಮನುಷ್ಯನನ್ನು ಕಚ್ಚಿದಾಗ, ಆ ವ್ಯಕ್ತಿಯ ರಕ್ತದಲ್ಲಿ ಡೆಂೆ ವೈರಸ್ ಸೇರಿಕೊಂಡು ಅವನಿಗೂ ಆ ರೋಗ ಹರಡುತ್ತದೆ. ಡೆಂೆ ಸೊಳ್ಳೆಗಳು ನೀರಿನ ತೊಟ್ಟಿ, ಡ್ರಮ್, ಬಿಂದಿಗೆಗಳಲ್ಲಿ ಹೆಚ್ಚು ದಿನ ಸಂಗ್ರಹಿಸಿದ ನೀರು, ತೆಂಗಿನಚಿಪ್ಪು, ಟೈರ್ ಹಾಗೂ ತ್ಯಾಜ್ಯ ವಸ್ತುಗಳಲ್ಲಿ ನಿಲ್ಲುವ ನೀರಿನಿಂದ ಉತ್ಪತ್ತಿಯಾಗುತ್ತದೆ. ಮನೆಗಳ ತಾರಸಿಯ ಮೇಲೆ ನಿಲ್ಲುವ ನೀರಿನಲ್ಲೂ ಈ ಸೊಳ್ಳೆಗಳು ಮೊಟ್ಟೆ ಹಾಕುವುದರಿಂದ ಮಳೆಗಾಲದಲ್ಲಿ ಎಲ್ಲಿಯೂ ನೀರು ನಿಲ್ಲದಂತೆ ಎಚ್ಚರದಿಂದಿರಬೇಕಾಗುತ್ತದೆ.
ಡೆಂೆ ರೋಗ ಲಕ್ಷಣ:
ಡೆಂೆ ಜ್ವರವು ಸಾಮಾನ್ಯವಾಗಿ ಜ್ವರದ ಲಕ್ಷಣಗಳನ್ನು ತೋರಿಸುತ್ತದೆ. ಉದಾಹರಣೆಗೆ ಹೇಳುವುದಾದರೆ ಮೈ ಬಿಸಿ ಹೆಚ್ಚಾಗುವುದು, ತೀವ್ರ ತಲೆನೋವು, ಕೀಲು ಮತ್ತು ಸ್ನಾಯು ನೋವು, ರಕ್ತಸ್ರಾವ, ಕೆಲವು ಸಂದರ್ಭಗಳಲ್ಲಿ ಇದು ಡೆಂೆ ಹೆಮರಾಜಿಕ್ ಜ್ವರ ಎಂಬ ತೀವ್ರವಾದ ರೂಪಕ್ಕೆ ತಿರುಗಿ ಜೀವಕ್ಕೆ ಅಪಾಯಕಾರಿಯಾಗಬಹುದು. ಡೆಂೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಅಗತ್ಯ. ಸೊಳ್ಳೆಗಳ ಸಂತಾನೋತ್ಪತ್ತಿ ಸ್ಥಳಗಳನ್ನು ಕಡಿಮೆ ಮಾಡುವುದೇ ಇದಕ್ಕೆ ಮಾರ್ಗವಾಗಿದೆ. ಯಾರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುತ್ತದೆ ಅಂತಹವರು ಕೇವಲ ಒಂದು ಅಥವಾ ಎರಡು ವಾರಗಳಲ್ಲಿ ಈ ಸಮಸ್ಯೆಯಿಂದ ಪಾರಾಗುತ್ತಾರೆ. ಕೆಲವರಿಗೆ ಗಂಭೀರ ಸಮಸ್ಯೆಗಳು ಉಂಟಾಗಬಹುದು. ಮೂರು ದಿನಗಳ ಕಾಲ ನಿರಂತರವಾಗಿ ಜ್ವರ, ಮೈಕೈ ನೋವು ಕಾಡಿದರೆ ತಕ್ಷಣ ವೈದ್ಯರಿಗೆ ತೋರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.
ಮುನ್ನೆಚ್ಚರಿಕೆ ಅಗತ್ಯ:
ಡೆಂೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಅಲ್ಲದೇ ಸಾರ್ವಜನಿಕ ಸಹಕಾರವೂ ಅಗತ್ಯವಾಗಿದೆ. ಅದರಂತೆ ಜನರು ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಾಗಿದೆ. ಮಳೆಗಾಲದಲ್ಲಿ ಎಲ್ಲಿಯೂ ನೀರು ನಿಲ್ಲದಂತೆ ಎಚ್ಚರವಹಿಸಬೇಕಾಗಿದೆ. ಮುಖ್ಯವಾಗಿ ಸೊಳ್ಳೆ ಕಚ್ಚದಂತೆ ಸದಾ ನೋಡಿಕೊಳ್ಳಬೇಕು. ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಬಹಳ ಉತ್ತಮ. ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಬೇಕು. ಸೊಳ್ಳೆಗಳು ಕಡಿಯದಂತೆ ನೋಡಿಕೊಳ್ಳಲು ಮೈ ತುಂಬಾ ಬಟ್ಟೆ ಧರಿಸುವುದು ಅಗತ್ಯ. ಡೆಂೆ ಸೋಂಕಿನಿಂದ ಪಾರಾಗಲು ಹೆಚ್ಚಾಗಿ ಗಾಳಿ ಮತ್ತು ಬೆಳಕಿನ ವಾತಾವರಣ ತುಂಬಿರುವ ಪ್ರದೇಶದಲ್ಲಿ ವಾಸ ಮಾಡಬೇಕಾದ ಅವಶ್ಯಕತೆ ಇರುತ್ತದೆ. ಇರುವ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳುವುದರ ಮುಖಾಂತರ ಡೆಂೆ ಸೊಳ್ಳೆಗಳಿಗೆ ಕಡಿವಾಣ ಹಾಕಬಹುದು.
ಡೆಂೆ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ವರ್ಷವಿಡೀ ಜಾಗೃತಿ ಮೂಡಿಸಲಾಗುತ್ತಿದೆ. ಮುಂದಿನ ನಾಲ್ಕು ತಿಂಗಳಲ್ಲಿ ತುಂಬಾ ಸೂಕ್ಷ್ಮವಾಗಿ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸಲು ಸಿದ್ಧವಾಗಿದೆ. ಈ ಮೂಲಕ ಡೆಂೆ ರೋಗವನ್ನು ಸಂಪೂರ್ಣ ನಿಯಂತ್ರಿಸುತ್ತೇವೆ.
ಡಾ.ಚಿದಂಬರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಚಾಮರಾಜನಗರ.